Abhishek Ambareesh : ಜ್ಯೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambareesh) ಮತ್ತು ಅವಿವಾ ಬಿದ್ದಪ್ಪ (Aviva Bidappa) ದಂಪತಿಗೆ ಇಂದು ಗಂಡು ಮಗು (Baby Boy) ಜನನವಾಗಿದೆ.
ಹೌದು, ಅಭಿಷೇಕ್ ಪತ್ನಿ ಅವಿವಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರೂ ಕೂಡ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯವನ್ನು ಮಾಡಿಸಿಕೊಂಡಿದ್ದ ಆವಿವಾ ಅಭಿಷೇಕ್ ಸದ್ಯದಲ್ಲಿಯೇ ಹೊಸ ಅತಿಥಿ ಬರಲಿದ್ದಾನೆ ಎಂಬ ಸಿಹಿ ಸುದ್ದಿಯನ್ನು ನೀಡಿದ್ದರು. ಅಭಿಷೇಕ್-ಅವಿವಾ ಮದುವೆ ಕಳೆದ ವರ್ಷ ಜೂ.5ರಂದು ನಡೆದಿತ್ತು.
ಇದನ್ನೂ ಓದಿ: BPCL SBI credit card : ಈ ಕಾರ್ಡ್ ಇದ್ದರೆ ರಿಯಾಯಿತಿ ಬೆಲೆಗೆ ಪೆಟ್ರೋಲ್, ಡೀಸೆಲ್
ಮರಿ ರೆಬೆಲ್ ಸ್ಟಾರ್ ಹೇಗಿದ್ದಾನೆ ಗೊತ್ತಾ?
ಇನ್ನು, ರೆಬೆಲ್ ಸ್ಟಾರ್ ಅಂಬರೀಷ್ ಮನೆಯಲ್ಲಿ ಈಗ ಖುಷಿ ಮನೆ ಮಾಡಿದ್ದು, ಇಂದು ಅವಿವಾ ಗಂಡು ಮಗುವಿಗೆ ಜನ್ಮನೀಡಿದ್ದಾರೆ. ಮುದ್ದಾದ ಮೊಮ್ಮಗನ ಜೊತೆ ಸುಮಲತಾ ಅಂಬರೀಷ್ ಅವರು ಪೋಸ್ ಕೊಟ್ಟಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗಿದೆ.
ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ‘ಅಂಬಿ ಮತ್ತೆ ಹುಟ್ಟಿ ಬಂದ’ ಎಂದು ಅಂಬರೀಷ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಫೋಟೋ ಶೇರ್ ಮಾಡಿಕೊಳ್ತಿದ್ದಾರೆ.