ದಾವಣಗೆರೆ ಅ.19 : 2020-21 ನೇ ಸಾಲಿನಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರ ಇಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಮೂಲಕ 16 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿ ನೀಡಲಾಗುವುದು.
ಎಸ್.ಎಸ್.ಎಲ್.ಸಿ, ಐ.ಟಿ.ಐ, ಡಿಪ್ಲೊಮಾ ಹಾಗೂ ಬಿ.ಇ. ಪಾಸ್ ಆಗಿರುವ ಅಭ್ಯರ್ಥಿಗಳಿಗೆ 4 ತಿಂಗಳು ಅವಧಿಯ ಸಿಎನ್ಸಿ ಪ್ರೋಗ್ರಾಮರ್, ಕನ್ವೆನ್ಶನಲ್ ಟರ್ನಿಂಗ್ ಮಷಿನ್ ಆಪರೇಟರ್, ಕನ್ವೆನ್ಶನಲ್ ಮಿಲ್ಲಿಂಗ್ ಮಷಿನ್ ಆಪರೇಟರ್, ಕನ್ವೆನ್ಶನಲ್ ಸರ್ಫೇಸ್ ಗ್ರೈಂಡಿಂಗ್ ಮಷಿನ್ ಆಪರೇಟರ್, ಡಿಸೈನರ್-ಮೆಕ್ಯಾನಿಕಲ್, ಪ್ರೊಡಕ್ಷನ್ ಇಂಜಿನಿಯರ್ ಹಾಗೂ ಯುನಿಗ್ರಾಫಿಕ್ಸ್ . ಟೂಲ್ರೂಮ್ ಮಷಿನಿಷ್ಟ್ 12 ತಿಂಗಳು ಅವಧಿಯ ತರಬೇತಿ ಕಾರ್ಯಕ್ರಮಗಳನ್ನು ಉಚಿತವಾಗಿ ನಡೆಸಲಾಗುವುದು.
ತರಬೇತಿಯ ಅವಧಿಗೆ ಶಿಷ್ಯವೇತನ ನೀಡಲಾಗುವುದು. ತರಬೇತಿ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಬ್ಯಾಚ್ಗಳಲ್ಲಿ ಪ್ರಾರಂಭಿಸಲಾಗುವುದು. ಹಾಗೂ ಈ ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರು, ಜಿ.ಟಿ.ಟಿ.ಸಿ, 22 ಅ & ಆ, ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ, ಕೆಎಸ್ಆರ್ಟಿಸಿ ಡಿಪೋ ಹತ್ತಿರ, ಹರಿಹರ, ದೂರವಾಣಿ ಸಂಖ್ಯೆ: 08192-243937, 7019600676, 9742430685, 8711913947, 8884488202 ಸಂರ್ಪಕಿಸಬಹುದೆಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.




