Suside Attempt: ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಯತ್ನ: ರಕ್ಷಣೆ

ದಾಂಡೇಲಿ: ನಗರದ ಕುಳಗಿ ರಸ್ತೆಯ ಕಾಳಿ ನದಿ ಸೇತುವೆ ಬಳಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಬುಧವಾರ ಸಂಜೆ ನಡೆದಿದೆ. ನಗರದ ಸುಭಾಷನಗರ ನಿವಾಸಿಯಾಗಿರುವ ಹನುಮಂತ ಭಂಡಾರಿ(74) ಎಂಬುವವರೇ ಆತ್ಮಹತ್ಯೆಗೆ…

ದಾಂಡೇಲಿ: ನಗರದ ಕುಳಗಿ ರಸ್ತೆಯ ಕಾಳಿ ನದಿ ಸೇತುವೆ ಬಳಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಬುಧವಾರ ಸಂಜೆ ನಡೆದಿದೆ. ನಗರದ ಸುಭಾಷನಗರ ನಿವಾಸಿಯಾಗಿರುವ ಹನುಮಂತ ಭಂಡಾರಿ(74) ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿ, ಸ್ಥಳೀಯರು ಹಾಗೂ ಪೊಲೀಸರಿಂದ ರಕ್ಷಣೆಗೊಳಗಾದ ವೃದ್ಧರಾಗಿದ್ದಾರೆ.

ಹನುಮಂತ ಭಂಡಾರಿ ಸಂಜೆ ವಾಕಿಂಗ್ ಮಾಡುವುದಾಗಿ ಹೇಳಿ ಕಾಳಿ ನದಿ ಸೇತುವೆ ಬಳಿ ಬಂದಿದ್ದರು. ಬಳಿಕ ಯಾರಿಗೂ ತಿಳಿಯದಂತೆ ಸೇತುವೆಯ ಕೆಳಭಾಗಕ್ಕೆ ಹೋಗಿ, ಕಟ್ಟೆಯ ಮೇಲೆ ನಿಂತು ಆತ್ಮಹತ್ಯೆಗೆ ಮುಂದಾಗಿದ್ದರು. ಈ ವೇಳೆ ವ್ಯಕ್ತಿಯನ್ನು ಗಮನಿಸಿದ ಸ್ಥಳೀಯರು ಇವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ, ಮಾತು ಕೇಳದ ಇವರು ಮೇಲೆ ಬರಲು ಹಿಂದೇಟು ಹಾಕಿದ್ದಾರೆ. 

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ದಾಂಡೇಲಿ ನಗರ ಠಾಣೆಯ ತನಿಖೆ ವಿಭಾಗದ ಪಿಎಸ್ಐ ಕಿರಣ್ ಪಾಟೀಲ್ ಹಾಗೂ ಎಎಸ್ಐ ಮಹೆಬೂಬ ನಿಂಬುವಾಲೆ ಹಾಗೂ ಸಿಬ್ಬಂದಿ ವೃದ್ದ ಹನುಮಂತ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ರಕ್ಷಣೆ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನಲೆ ವೃದ್ಧ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.