ಚಿಕ್ಕೋಡಿ: ಬೈಕ್ ಸ್ಕಿಡ್ ಆದ ಪರಿಣಾಮ ಸಂಗೀತ ಶಿಕ್ಷಕ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಬಳಿ ನಡೆದಿದೆ. ದರ್ಶನ್ ಶಹಾ ಮೃತ ದುರ್ದೈವಿ ಶಿಕ್ಷಕ ಎಂದು ತಿಳಿದುಬಂದಿದೆ.
ದರ್ಶನ್ ಚಿಕ್ಕೋಡಿ ಪಟ್ಟಣದ ಕೆಎಲ್ಇ ಸಂಸ್ಥೆಯ ಸಿಬಿಎಸ್ಸಿ ಶಾಲೆಯಲ್ಲಿ ಸಂಗೀತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೈಕ್ ಮೇಲೆ ಹೋಗುತ್ತಿರುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದ್ದಾರೆ. ಇದರಿಂದಾಗಿ ದರ್ಶನ ಅವರ ತಲೆಗೆ ಗಂಭೀರವಾಗಿ ಗಾಯವಾಗಿತ್ತು.
ಕೂಡಲೆ ಇವರನ್ನು ಚಿಕ್ಕೋಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಕೊಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪಿಎಸ್ಐ ರೂಪಾ ಗೂಡೊಡಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.