Look Adalat: ಲೋಕ ಅದಾಲತ್ ಮೂಲಕ 5000 ಪ್ರಕರಣ ಇತ್ಯರ್ಥಪಡಿಸುವ ಗುರಿ: ನ್ಯಾ.ದಿವ್ಯಶ್ರೀ

ಕಾರವಾರ: ಡಿಸೆಂಬರ್ 14 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ 5000ಕ್ಕೂ ಅಧಿಕ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…

ಕಾರವಾರ: ಡಿಸೆಂಬರ್ 14 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ 5000ಕ್ಕೂ ಅಧಿಕ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ದಿವ್ಯಶ್ರೀ ಸಿ.ಎಂ. ಹೇಳಿದರು. ಅವರು ಇಂದು ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಪ್ರಸ್ತುತ ಜಿಲ್ಲೆಯ ನ್ಯಾಯಾಲಯದಲ್ಲಿ ಒಟ್ಟು 33,663 ಪ್ರಕರಣಗಳು ಬಾಕಿ ಇವೆ. ಈಗಾಗಲೇ ಇತ್ಯರ್ಥಪಡಿಸಲು ಪ್ರಸ್ತುತ 2392 ಪ್ರಕರಣಗಳು ಬಾಕಿ ಇದ್ದು ಇವುಗಳನ್ನೂ ಸೇರಿದಂತೆ ಒಟ್ಟು 5000 ಕ್ಕೂ ಅಧಿಕ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ಕಳೆದ ಬಾರಿ ನಡೆದ ಲೋಕ ಅದಾಲತ್‌ನಲ್ಲಿ 4083 ಪ್ರಕರಣಗಳಲ್ಲಿ ರೂ. 21.10 ಕೋಟಿ ಮೊತ್ತದ ಇತ್ಯರ್ಥಪಡಿಸಲಾಗಿತ್ತು ಎಂದರು.

ಲೋಕ ಅದಾಲತ್‌ನಲ್ಲಿ ಸಾರ್ವಜನಿಕರು ಬ್ಯಾಂಕ್ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವಿದ್ಯುತ್, ಆಸ್ತಿ ಕರ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂ ಸ್ವಾಧೀನ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ/ಕೌಟುಂಬಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಇತರೆ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ತಪಡಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ತಮ್ಮ ವಕೀಲರ ಮೂಲಕ ಅಥವಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.

Vijayaprabha Mobile App free

ಜಿಲ್ಲೆಯ ಸಾರ್ವಜನಿಕರು ಡಿಸೆಂಬರ್ 14 ರಂದು ನಡೆಯುವ ಲೋಕ ಅದಾಲತ್‌ನಲ್ಲಿ ಭಾಗವಹಿಸುವ ಮೂಲಕ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಳ್ಳುವಂತೆ ನ್ಯಾ.ದಿವ್ಯಶ್ರೀ ಸಿ.ಎಂ. ಹೇಳಿದರು.

ಸಭೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ.ಬಿ. ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.