Heavy rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಹೈ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

Heavy rain : ಚಂಡಮಾರುತದ ಪರಿಚಲನೆಯಿಂದಾಗಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ. ಹೌದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ…

Heavy rain

Heavy rain : ಚಂಡಮಾರುತದ ಪರಿಚಲನೆಯಿಂದಾಗಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ.

ಹೌದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದ್ದು, ಹಾಸನ, ಕೊಡಗು, ಮಂಡ್ಯ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಬರುವ ನಿರೀಕ್ಷೆಯಿದೆ. ಚಾಮರಾಜನಗರ, ರಾಮನಗರ, ಮೈಸೂರು & ತುಮಕೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Rita Anchan | ಹಿರಿಯ ನಟಿ ರೀಟಾ ಅಂಚನ್‌ ನಿಧನ

Vijayaprabha Mobile App free

ಮುಂದಿನ 24 ಗಂಟೆಗಳ ಕಾಲ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇನ್ನೂ ಮುಂದಿನ 24 ಗಂಟೆಗಳ ಕಾಲ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Heavy rain : ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗಿಂತ ಅಧಿಕ ಮಳೆ

ಇನ್ನು, ರಾಜ್ಯದಲ್ಲಿ ಹಿಂಗಾರು ಮಳೆ ಜೋರಾಗಿರುವುದರಿಂದ ಈ ಬಾರಿ ಉತ್ತಮ ಮಳೆಯಾಗಿದ್ದು, ಈ ಸಲ ರಾಜ್ಯದಲ್ಲಿ ವಾಡಿಕೆಗಿಂತ ಶೇ.20ರಷ್ಟು ಹೆಚ್ಚು ಮಳೆ ದಾಖಲಾಗಿದೆ.

ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಉತ್ತಮ ಮಳೆಯಾಗಿದ್ದು, 28 ಜಿಲ್ಲೆಗಳಲ್ಲಿ ಅಕ್ಟೋಬರ್‌ ಅಂತ್ಯದವರೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಈ ಬಾರಿಯೂ ಹೆಚ್ಚು ಮಳೆಯಾಗಿದ್ದು, ರಾಯಚೂರು, ರಾಮನಗರ, ಗದಗ ಜಿಲ್ಲೆಗಳಲ್ಲಿ ಮಾತ್ರ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ದಾಖಲಾಗಿದೆ.

ಇದನ್ನೂ ಓದಿ: Kartika Purnima | ಕಾರ್ತಿಕ ಪೂರ್ಣಿಮೆ ಈ ರಾಶಿಯವರಿಗೆ ಅತ್ಯಂತ ಶುಭ ಯೋಗ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.