Money Cheating: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 68 ಲಕ್ಷ ಸುಲಿಗೆ: ಮೂವರು ಅಂದರ್

ಮಂಗಳೂರು: ಸಿಬಿಐ ಅಧಿಕಾರಿಗಳೆಂದು ಕರೆ ಮಾಡಿ 68 ಲಕ್ಷ ರೂ. ಸುಲಿಗೆ ಮಾಡಿದ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಹೆಸರಿನಲ್ಲಿ 90 ಲಕ್ಷ ರೂ. ವರ್ಗಾಯಿಸಿ ವಂಚಿಸಿದ ಎರಡು ಸೈಬರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು…

ಮಂಗಳೂರು: ಸಿಬಿಐ ಅಧಿಕಾರಿಗಳೆಂದು ಕರೆ ಮಾಡಿ 68 ಲಕ್ಷ ರೂ. ಸುಲಿಗೆ ಮಾಡಿದ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಹೆಸರಿನಲ್ಲಿ 90 ಲಕ್ಷ ರೂ. ವರ್ಗಾಯಿಸಿ ವಂಚಿಸಿದ ಎರಡು ಸೈಬರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕಾವೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ನಿಸಾರ್ ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಬಂಧನ ನಡೆದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನಿಸಾರ್ ಸೈಬರ್ ಕ್ರೈಮ್ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಯಂತೆ ನಟಿಸುವ ಮೂಲಕ ಅನೇಕ ಸಂತ್ರಸ್ತರನ್ನು ವಂಚಿಸಿದ್ದಾನೆ ಮತ್ತು ಈ ಸುಳ್ಳು ನೆಪದಲ್ಲಿ ದೊಡ್ಡ ಮೊತ್ತದ ಹಣವನ್ನು ಸುಲಿಗೆ ಮಾಡಿದ್ದಾನೆ.

Vijayaprabha Mobile App free

ಜೊತೆಗೆ ಅಧಿಕ ಲಾಭ ಕೊಡುವುದಾಗಿ ನಂಬಿಸಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವಂತೆ ಸುಮಾರು 90 ಲಕ್ಷ ರೂ. ಹಣವನ್ನು ವಂಚನೆ ಮಾಡಿದ ಆರೋಪಿ ಕೇರಳದ ಕೋಝಿಕೋಡ್‌ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್.ಇ‌ ಎಂಬವರನ್ನು ಬಂಧಿಸಲಾಗಿದೆ. ಈ ಆರೋಪಿಗಳು ಷೇರು ಹೂಡಿಕೆಯಿಂದ ಹೆಚ್ಚಿನ ಆದಾಯವನ್ನು ಭರವಸೆ ನೀಡಿ ಸಂತ್ರಸ್ತರಿಗೆ ಸುಮಾರು 90 ಲಕ್ಷ ರೂ ವಂಚಿಸಿದ್ದಾಗಿ ತಿಳಿದುಬಂದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.