ರಾಜ್ಯದಲ್ಲಿ ಪ್ರವಾಹ: ಆಗಸ್ಟ್ ತಿಂಗಳಲ್ಲಿ ಹೊರಡಿಸಿದ್ದ ಆದೇಶ ಮುಂದುವರೆಸಲು ರಾಜ್ಯ ಸರ್ಕಾರ ಅನುಮತಿ!

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದು ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ನೆರೆಯಿಂದ ಸಾವಿರಾರು ಮನೆಗಳಿಗೆ ಅಪಾರ ಹಾನಿ ಉಂಟಾದ ಹಿನ್ನಲೆ ಆಗಸ್ಟ್ ತಿಂಗಳಲ್ಲಿ ಹೊರಡಿಸಿದ್ದ ಆದೇಶವನ್ನು ಯಥಾವತ್ತಾಗಿ ಮುಂದುವರೆಸಲು ರಾಜ್ಯ…

Heavy Rain vijayaprabha news

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದು ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ನೆರೆಯಿಂದ ಸಾವಿರಾರು ಮನೆಗಳಿಗೆ ಅಪಾರ ಹಾನಿ ಉಂಟಾದ ಹಿನ್ನಲೆ ಆಗಸ್ಟ್ ತಿಂಗಳಲ್ಲಿ ಹೊರಡಿಸಿದ್ದ ಆದೇಶವನ್ನು ಯಥಾವತ್ತಾಗಿ ಮುಂದುವರೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ರಾಜ್ಯ ಸರ್ಕಾರವು ಕೇಂದ್ರದ ಮಾರ್ಗಸೂಚಿಯಲ್ಲಿ ನಿರ್ಧರಿಸಿದ ದರಕ್ಕಿಂತ ಹೆಚ್ಚುವರಿಯಾಗಿ ಪರಿಹಾರ ಒದಗಿಸಲು ಮಂಜೂರಾತಿ ನೀಡಿ ಆದೇಶ ಹೊರಡಿಸಿದ್ದು ಶೇ.75ಕ್ಕಿಂತ ಹೆಚ್ಚು ಭಾಗ ಮನೆಗೆ ಹಾನಿಯಾಗಿದ್ದರೆ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

ಶೇ. 25 ರಿಂದ75 ರಷ್ಟು ಮನೆ ಹಾನಿಯಾಗಿದ್ದರೆ ಮನೆ ಕೆಡವಿ ಹೊಸದಾಗಿ ನಿರ್ಮಿಸಲುರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ ಶೇ. 25 ರಿಂದ 75 ರಷ್ಟು ದುರಸ್ತಿಗೆ 3 ಲಕ್ಷ ಪರಿಹಾರ ಘೋಷಣೆ ಮಾಡಿದ್ದೂ, ಶೇ. 15 ರಿಂದ 25 ರಷ್ಟು ಮನೆ ಹಾನಿಗೆ 50 ಸಾವಿರ ಪರಿಹಾರ ಘೋಷಣೆ ಮಾಡಿ ರಾಜ್ಯ ಆದೇಶ ಹೊರಡಿಸಿದೆ.

Vijayaprabha Mobile App free

ಇದನ್ನು ಓದಿ: ಎಚ್ಚರಿಕೆ: ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನು 3 ದಿನ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.