Bail application: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ನವೆಂಬರ್ 21) ಹೈಕೋರ್ಟ್ನಲ್ಲಿ ನಡೆಯಲಿದೆ.
ಹೌದು, ಈಗಾಗಲೇ ಅನಾರೋಗ್ಯದ ಹಿನ್ನೆಲೆ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದಿಂದ ಜಾಮೀನು ನೀಡುವಂತೆ ಈ ಹಿಂದೆ ಹೈಕೋರ್ಟ್’ಗೆ ಸಾಮಾನ್ಯ ಅರ್ಜಿ ಸಲ್ಲಿಸಿದ್ದರು. ಸದ್ಯ ದರ್ಶನ್ ಜಾಮೀನು ನಿರೀಕ್ಷೆಯಲ್ಲಿದ್ದಾರೆ.
ಇದನ್ನೂ ಓದಿ: Divorce | ಮುರಿದುಬಿದ್ದ AR ರೆಹಮಾನ್ ದಾಂಪತ್ಯ; ವಿಚ್ಛೇದನ ಘೋಷಿಸಿದ ಪತ್ನಿ!
Bail application : ಜಾಮೀನು ಸಿಗುವ ನಿರೀಕ್ಷೆಯಲ್ಲಿ ಪವಿತ್ರಾ ಗೌಡ
ಇನ್ನು, ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ A1 ಆಗಿದ್ದು, ಜೈಲು ಸೇರಿ 5 ತಿಂಗಳು ಕಳೆದಿದ್ದರೂ ಪವಿತ್ರಾಗೆ ಜಾಮೀನು ಸಿಕ್ಕಿಲ್ಲ. ಇಂದು ಪ್ರಮುಖ ಆರೋಪಗಳ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಬೇಲ್ ಸಿಗುವ ನಿರೀಕ್ಷೆಯಲ್ಲಿ ಪವಿತ್ರಾ ಗೌಡ ಇದ್ದಾರೆ.
ನ್ಯಾ.S. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ದರ್ಶನ್, ಪವಿತ್ರಾ ಗೌಡ, ಆರ್. ನಾಗರಾಜು, ಅನುಕುಮಾರ್, ಎಂ. ಲಕ್ಷ್ಮಣ್, ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ಮಾಡಲಾಗುವುದು. ಪವನ್, ನಂದೀಶ್ ಅವರ ಜಾಮೀನು ಅರ್ಜಿ ವಜಾ ಆಗಿದೆ.
ಇದನ್ನೂ ಓದಿ: Actor Thandavaram | ಸಿನಿಮಾ ಅರ್ಧಕ್ಕೆ ನಿಂತಿದ್ದಕ್ಕೆ ನಿರ್ದೇಶನ ಮೇಲೆ ಫೈರ್ ಮಾಡಿದ ನಾಯಕ ನಟ ಅರೆಸ್ಟ್..!