Accident: ಸ್ಕೂಲ್ ಬಸ್ಸಿಗೆ ಡಿಕ್ಕಿ ತಪ್ಪಿಸಲು ಹೋಗಿ ಮನೆಗೆ ನುಗ್ಗಿದ್ದ ಮದುವೆ ದಿಬ್ಬಣ!

ಪುತ್ತೂರು: ಶಾಲಾ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮದುವೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ್ದ ಘಟನೆ ಗುರುವಾರ ಬೆಳಿಗ್ಗೆ ಕಾವು ಸಮೀಪದ ಅಮ್ಮಿನಡ್ಕ ಎಂಬಲ್ಲಿ ನಡೆದಿದೆ.  ಅಪಘಾತದಲ್ಲಿ ಮನೆ…

ಪುತ್ತೂರು: ಶಾಲಾ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮದುವೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ್ದ ಘಟನೆ ಗುರುವಾರ ಬೆಳಿಗ್ಗೆ ಕಾವು ಸಮೀಪದ ಅಮ್ಮಿನಡ್ಕ ಎಂಬಲ್ಲಿ ನಡೆದಿದೆ. 

ಅಪಘಾತದಲ್ಲಿ ಮನೆ ಸಂಪೂರ್ಣ ಜಖಂಗೊಂಡಿದ್ದು, ಮನೆಯಲ್ಲಿದ್ದವರಿಗೆ ಹಾಗೂ ಪ್ರಯಾಣಿಕರಿಗೆ ಯಾವುದೇ ಆಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಮದುವೆಗೆ ತೆರಳುವ ಪ್ರಯಾಣಿಕರನ್ನು ಕೊಂಡು ಹೋಗುತ್ತಿದ್ದ ಬಸ್ಸು ಪುತ್ತೂರಿನಿಂದ ಸುಳ್ಯದ ಕಡೆಗೆ ಹೋಗುತಿತ್ತು. ಮಧುರ ಇಂಟ‌ರ್ ನ್ಯಾಷನಲ್ ಸ್ಕೂಲ್ ಗೆ ಸೇರಿದ ಶಾಲಾ ಬಸ್ಸು ಸುಳ್ಯದಿಂದ ಪರ್ಲಂಪಾಡಿಗೆ ಮಕ್ಕಳನ್ನು ಕರೆದುಕೊಂಡು ಬರಲು ತೆರಳುತ್ತಿತ್ತು. ಅದು ಅಮ್ಮಿನಡ್ಕ ಬಳಿ ಪೆರ್ಲಂಪಾಡಿ ಕಡೆಗೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಮದುವೆ ಬಸ್ಸು ಬಂದಿದ್ದು, ಅದರ ಚಾಲಕ ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಇನ್ನೊಂದು ಬದಿಗೆ ವಾಹನವನ್ನು ತಿರುಗಿಸಿದ್ದಾರೆ.

Vijayaprabha Mobile App free

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಬಸ್ಸಿನಲ್ಲಿದ್ದವರಿಗೂ ಸಣ್ಣಪುಟ್ಟ ತರಚು ಗಾಯಗಳಾಗಿದೆ ಹೊರತು ಯಾವುದೇ ಗಂಭೀರ ಅಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.