Nursing Student: ಕೇರಳ‌ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮೂವರು ಸಹಪಾಠಿಗಳು ಅರೆಸ್ಟ್!

ಕೇರಳ: ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಕೇರಳದ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದೆ. ಕೇರಳದ ಪತ್ತನಂತಟ್ಟದಲ್ಲಿ ಈ ಘಟನೆ ನಡೆದಿದ್ದು, ಅಮ್ಮು ಸಜೀವ್(21) ಮೃತ…

ಕೇರಳ: ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಕೇರಳದ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದೆ. ಕೇರಳದ ಪತ್ತನಂತಟ್ಟದಲ್ಲಿ ಈ ಘಟನೆ ನಡೆದಿದ್ದು, ಅಮ್ಮು ಸಜೀವ್(21) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.

ಅಮ್ಮು ಸಾವಿಗೆ ಸಹಪಾಠಿಗಳ ಪ್ರಚೋದನೆಯೇ ಕಾರಣ ಎನ್ನಲಾಗಿದೆ. ಪಠಾಣಪುರಂ ನಿವಾಸಿ ಅಲೀನಾ, ಚಂಗನಾಶ್ಮೀರಿ ನಿವಾಸಿ ಅಕ್ಷಿತಾ ಮತ್ತು ಕೊಟ್ಟಾಯಂ ನಿವಾಸಿ ಅಂಜನಾ ಬಂಧಿತ ವಿದ್ಯಾರ್ಥಿನಿಯರಾಗಿದ್ದಾರೆ. 

ಪತ್ತನಂತಿಟ್ಟ ಎಸ್‌ಎಂಇ ನರ್ಸಿಂಗ್‌ ಕಾಲೇಜಿನ ನಾಲ್ಕನೇ ವರ್ಷದ ವಿದ್ಯಾರ್ಥಿನಿ ಹಾಗೂ ತಿರುವನಂತಪುರದ ಐರೂರ್‌ಪಾರ ರಾಮಪುರತುಪೊಯ್ಕಾ ಶಿವಂ ಮನೆಯ ಸಜೀವ್ ಮತ್ತು ರಾಧಾಮಣಿ ದಂಪತಿಯ ಪುತ್ರಿ ಅಮ್ಮು, ಕಳೆದ ನ.15 ರಂದು ಹಾಸ್ಟೆಲ್‌ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

Vijayaprabha Mobile App free

ಅಮ್ಮು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಕುಟುಂಬದವರು ಪಟ್ಟು ಹಿಡಿದು, ಸಹಪಾಠಿಗಳ ವಿರುದ್ಧ ಆರೋಪ ವ್ಯಕ್ತಪಡಿಸಿದ್ದರು. ಆಕೆ ಮಾನಸಿಕವಾಗಿ ಕುಗ್ಗಲು ಸಹಪಾಠಿಗಳೇ ಕಾರಣ ಎಂದು ಮನೆಯವರು ಆರೋಪಿಸಿದ್ದು, ವಿದ್ಯಾರ್ಥಿನಿಯರನ್ನು ವಿಚಾರಣೆಗೊಳಪಡಿಸುವಂತೆ ಒತ್ತಾಯಿಸಿದ್ದರು. ಸದ್ಯ ಸಹಪಾಠಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಈ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ನರ್ಸಿಂಗ್ ಕೋರ್ಸ್ ಪೂರ್ಣಗೊಳಿಸಲು ಕೇವಲ ಒಂದೇ ಒಂದು ತಿಂಗಳು ಬಾಕಿ ಇರುವ ವೇಳೆಗೆ ಸಾವಿಗೆ ಶರಣಾಗುವ ಮೂಲಕ ತನ್ನ ಆಸೆ, ಕನಸ್ಸುಗಳನ್ನು ಅಮ್ಮು ನುಚ್ಚನೂರು ಮಾಡಿದ್ದು, ಹೆತ್ತವರು ಮತ್ತು ಕುಟುಂಬಸ್ಥರು ಕಣ್ಣೀರಲ್ಲಿ ಕೈತೊಳಯುವಂತಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.