Mobile Theft: ಪ್ರಯಾಣಿಕರ ಸೋಗಿನಲ್ಲಿ ಮೊಬೈಲ್‌ ಕದಿಯುತ್ತಿದ್ದ ಇಬ್ಬರ ಬಂಧನ; 60 ಮೊಬೈಲ್ ಜಪ್ತಿ!

ಬೆಂಗಳೂರು: ಪ್ರಯಾಣಿಕರಂತೆ ಬಿಎಂಟಿಸಿ ಬಸ್‌ ಗಳಲ್ಲಿ ಪ್ರಯಾಣಿಸುತ್ತಾ ಮೊಬೈಲ್‌ ಫೋನ್‌‌ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಹಾಲಕ್ಷ್ಮೀ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಇವರಿಂದ 60 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ. ಕೊಮ್ಮು ಪ್ರಶಾಂತ ಹಾಗೂ…

ಬೆಂಗಳೂರು: ಪ್ರಯಾಣಿಕರಂತೆ ಬಿಎಂಟಿಸಿ ಬಸ್‌ ಗಳಲ್ಲಿ ಪ್ರಯಾಣಿಸುತ್ತಾ ಮೊಬೈಲ್‌ ಫೋನ್‌‌ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಹಾಲಕ್ಷ್ಮೀ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಇವರಿಂದ 60 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ. ಕೊಮ್ಮು ಪ್ರಶಾಂತ ಹಾಗೂ ಬಂಧಿತ ಆರೋಪಿಗಳು. 

ಕೆಲವು ದಿನಗಳ ಹಿಂದೆ ಮಹಾಲಕ್ಷ್ಮೀ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನವಾಗಿದೆ ಎಂದು ಒಬ್ಬರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಮೈಸೂರು ಸೋಪ್‌ ಫ್ಯಾಕ್ಟರಿ ಬಳಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದರು. 

ವಿಚಾರಣೆ ವೇಳೆ ಆರೋಪಿಗಳು ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ತೆರಳಿ ಮೊಬೈಲ್‌ಗಳನ್ನು ಕಳವು ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳ ಬಂಧನದ ಹಿನ್ನಲೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊಬೈಲ್ ಕಳ್ಳತನ ಒಂದು ಪ್ರಕರಣ ಪತ್ತೆಯಾಗಿದೆ.

Vijayaprabha Mobile App free

ಸಾಮಾನ್ಯವಾಗಿ ಮೊಬೈಲ್ ಕಳೆದುಕೊಂಡವರು ದೂರು ನೀಡುವುದಿಲ್ಲ. ಹೀಗಾಗಿ 59 ಮೊಬೈಲ್ ಫೋನ್ ವಾರಸುದಾರರ ಪತ್ತೆಯಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ದ ಮೊಬೈಲ್‌ಗಳನ್ನು ಇವರು ಕಡಿಮೆ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು. ಜನನಿಬಿಡ ಪ್ರದೇಶಗಳಲ್ಲಿ ಸಂಚರಿಸಿ ಮೊಬೈಲ್ ಎಗರಿಸುವ ಖಯಾಲಿ ಬೆಳೆಸಿಕೊಂಡಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.