BPL card | BPL ಕಾರ್ಡ್ ಫಲಾನುಭವಿಗಳಿಗೆ ರಿಲೀಫ್ : ಸರ್ಕಾರದಿಂದ ಮಹತ್ವದ ಆದೇಶ

BPL card : ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ BPL ಕಾರ್ಡ್ ರದ್ದು ಮಾಡದಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ.…

BPL card

BPL card : ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ BPL ಕಾರ್ಡ್ ರದ್ದು ಮಾಡದಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ.

ಹೌದು, ಸರ್ಕಾರಿ ನೌಕರರು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದ ಅರ್ಹ ಪಡೀತರ ಚೀಟಿದಾರರ ಕಾರ್ಡ್ ಗಳನ್ನು (BPL card ) ರದ್ದು ಮಾಡಲ್ಲ ಎಂದು ಆಹಾರ ಇಲಾಖೆಯ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದರು. ಇದೀಗ ಸರ್ಕಾರ ಈ ಕುರಿತಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: Gruhalakshmi Yojana | ತೆರಿಗೆ ಕಟ್ಟುವವರಿಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Vijayaprabha Mobile App free

ಈ ಪ್ರಕಾರ ಅರ್ಹ ಫಲಾನುಭವಿಗಳ BPL ಕಾರ್ಡ್ ರದ್ದಾಗುವುದಿಲ್ಲ. ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್ ನಲ್ಲಿ ಅವಕಾಶ ನೀಡಲಾಗಿರುತ್ತದೆ. ಈ ಮರುಸ್ಥಾಪನೆ ಕಾರ್ಯವನ್ನು ನೋಡಲ್ ಅಧಿಕಾರಿ ಅವರು ಉಸ್ತುವಾರಿ ವಹಿಸಿದ ಜಿಲ್ಲೆಗಳಲ್ಲಿ ಮೇಲ್ವಿಚಾರಣೆಯನ್ನು ಮಾಡುತ್ತಾರೆ.

ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (2)ರ ನಡವಳಿಯಲ್ಲಿ ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಕ್ರಮ ವಹಿಸುವಂತೆ ಸೂಚಿಸಲಾಗಿತ್ತು. ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮವನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಸೂಚಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.