ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ್ದ ಸಂಬಂಧ ಉತ್ತರಕನ್ನಡದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದತಿ ಕೋರಿ ಮಾಜಿ ಸಂಸದ ಅನಂತಕುಮಾರ ಹೆಗಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು.
ಅನಂತಕುಮಾರ ಹೆಗಡೆ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ರದ್ದತಿ ಕೋರಿ ಅನಂತಕುಮಾರ ಹೆಗಡೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಿಂದ ವಿಚಾರಣೆ ನಡೆದಿದ್ದು, ಈ ಸಂಬಂಧ ವಾದ ಮಾಡಿದ ವಕೀಲರು, ಅನಂತಕುಮಾರ ಕೋಮು ದ್ವೇಷದ ಭಾಷಣ ಮಾಡಿರಲಿಲ್ಲ. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದರು ಎಂದು ವಾದ ಮಂಡಿಸಿದ್ದಾರೆ.
ಅರ್ಜಿ ಸಂಬಂಧ ವಾದ ಆಲಿಸಿದ ಏಕಸದಸ್ಯ ಪೀಠ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.