Heavy rain : ಫೆಂಗಲ್ ಚಂಡಮಾರುತದ ಎಫೆಕ್ಟ್ ಕರ್ನಾಟಕಕ್ಕೂ ತಟ್ಟಲಿದ್ದು, ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹೌದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಇದನ್ನೂ ಓದಿ: ಮುಸ್ಲಿಮರಿಗೆ ಮತದಾನ ಹಕ್ಕು ನೀಡದಂತೆ ಚಂದ್ರಶೇಖರ ಸ್ವಾಮೀಜಿ ಹೇಳಿಕೆ: FIR ದಾಖಲು
ಇನ್ನು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆಯಿದ್ದು ತಾಪಮಾನದಲ್ಲಿ 3-4 ಡಿಗ್ರಿ ಸೆಲ್ಸಿಯಸ್ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.