ಬಿಸಿಯೂಟದ ‘ಶೇಂಗಾ ಚಿಕ್ಕಿ’ ತಿಂದು ವಿದ್ಯಾರ್ಥಿಗಳು ಸುಸ್ತೋ ಸುಸ್ತು!

ತುಮಕೂರು: ಕಡಲೆಕಾಯಿ (ಶೇಂಗಾ) ಚಿಕ್ಕಿ ತಿಂದು 46 ವಿದ್ಯಾರ್ಥಿಗಳಿಗೆ ವಾಂತಿಯಾಗಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ ಬಿಸಿಯೂಟ ವೇಳೆ ನೀಡಿದ್ದ…

ತುಮಕೂರು: ಕಡಲೆಕಾಯಿ (ಶೇಂಗಾ) ಚಿಕ್ಕಿ ತಿಂದು 46 ವಿದ್ಯಾರ್ಥಿಗಳಿಗೆ ವಾಂತಿಯಾಗಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಶುಕ್ರವಾರ ಮಧ್ಯಾಹ್ನ ಬಿಸಿಯೂಟ ವೇಳೆ ನೀಡಿದ್ದ ಚಿಕ್ಕಿ ತಿಂದು ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳಿಗೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ತಹಶೀಲ್ದಾ‌ರ್ ವರದರಾಜು, ಬಿಇಒ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ವಿಷಯ ತಿಳಿದ ತಕ್ಷಣವೇ ನಾನು ಭೇಟಿ ನೀಡಿದ್ದೇನೆ. ಮಧ್ಯಾಹ್ನ ಶಾಲೆಯಲ್ಲಿ ಊಟ ಮಾಡಿರುವುದಾಗಿ ಹೇಳುತ್ತಿದ್ದಾರೆ.ಯಾರಿಗೋ ಒಬ್ಬರಿಗೆ ಅಥವಾ ಇಬ್ಬರಿಗೆ ಸ್ವಲ್ಪ ವಾಂತಿಯಾಗಿದೆ ಬಿಟ್ರೆ ಬೇರೆ ಮಕ್ಕಳಿಗೆ ತೊಂದರೆ ಆಗಿಲ್ಲ. ಆ ಸಂದರ್ಭದಲ್ಲಿ ಎಲ್ಲಾ ಮಕ್ಕಳು ಸ್ವಲ್ಪ ಗಾಬರಿಯಾದ್ದರಿಂದ ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ಯಾರಿಗೂ ಯಾವುದೇ ರೀತಿಯ ತೊಂದರೆಯಿಲ್ಲ. ಯಾವ ಪೋಷಕರು ಭಯಪಡುವ ಅವಶ್ಯಕತೆ ಇಲ್ಲ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಹಸೀಲ್ದಾರ್‌ ವರದರಾಜು ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.