ಬೆಂಗಳೂರು: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ರವರ “ಆತ್ಮ ನಿರ್ಭರ ಭಾರತ್” ಪರಿಕಲ್ಪನೆಗೆ ಅನುಗುಣವಾಗಿ ಹುಬ್ಬಳ್ಳಿಯಲ್ಲಿ ಎಲೆಕ್ಟ್ರಾನಿಕ್ಸ್ & ಸರಕುಗಳ ಕ್ಲಸ್ಟರ್ ತಲೆಯೆತ್ತಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು,”ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರೆದಿದ್ದು 2020ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ (ಎಫ್ಡಿಐ) ಆಕರ್ಷಿಸಿದೆ. ಕೊರೋನಾ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆಯಾಗಿದೆ.
ಭಾರತದ ಮೊದಲ ವಲಯ-ನಿರ್ದಿಷ್ಟ 3,540 ಕೋಟಿ ರೂ. ಹೂಡಿಕೆಯಾಗಿ ಗ್ರಾಹಕ ಎಲೆಕ್ಟ್ರಾನಿಕ್ಸ್ & ಸರಕುಗಳ ಕ್ಲಸ್ಟರ್ ಹುಬ್ಬಳ್ಳಿಯಲ್ಲಿ ತಲೆಯೆತ್ತಲಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ಆತ್ಮ ನಿರ್ಭರ ಭರತ್ ಪರಿಕಲ್ಪನೆಗೆ ಅನುಗುಣವಾಗಿ, ಇಲ್ಲಿ ವಿಶ್ವದರ್ಜೆಯ ಸೌಲಭ್ಯ ಲಭ್ಯವಾಗಲಿದ್ದು, 20 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಿದೆ.
ಅಭಿವೃದ್ಧಿಗೆ ಪೂರಕವಾಗಿರುವ ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಕರ್ನಾಟಕ ಪ್ರೋತ್ಸಾಹಿಸುತ್ತಲೇ ಬಂದಿದೆ. ನಗರ ಚಲನಶೀಲತೆ, ಉಪಗ್ರಹ ತಂತ್ರಜ್ಞಾನ, ಸಾವಯವ ಕೃಷಿ, ಆಗ್ಮೆಂಟೆಡ್ ರಿಯಾಲಿಟಿ ಮೊದಲಾದ ವಿಭಿನ್ನ ಕಾರ್ಯಕ್ಷೇತ್ರಗಳಲ್ಲಿ ಕರ್ನಾಟಕದ 15 ನವೋದ್ಯಮಗಳು ರಾಷ್ಟ್ರೀಯ ನವೋದ್ಯಮ ಪ್ರಶಸ್ತಿ ಗೆದ್ದಿರುವುದು ಹೆಮ್ಮೆಯ ಸಂಗತಿ” ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.
ಭಾರತದ ಮೊದಲ ವಲಯ-ನಿರ್ದಿಷ್ಟ 3,540 ಕೋಟಿ ರೂ. ಹೂಡಿಕೆಯಾಗಿ ಗ್ರಾಹಕ ಎಲೆಕ್ಟ್ರಾನಿಕ್ಸ್ & ಸರಕುಗಳ ಕ್ಲಸ್ಟರ್ ಹುಬ್ಬಳ್ಳಿಯಲ್ಲಿ ತಲೆಯೆತ್ತಲಿದೆ. ಪ್ರಧಾನಿ ಶ್ರೀ @narendramodi ರವರ #AtmaNirbharBharat ಪರಿಕಲ್ಪನೆಗೆ ಅನುಗುಣವಾಗಿ, ಇಲ್ಲಿ ವಿಶ್ವದರ್ಜೆಯ ಸೌಲಭ್ಯ ಲಭ್ಯವಾಗಲಿದ್ದು, 20 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಿದೆ. (2/3)
— B.S. Yediyurappa (@BSYBJP) October 23, 2020




