ಬೆಂಗಳೂರು: ನಿರ್ಮಲ ಸೀತಾರಾಮನ್ ಅವರು ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ ನಳಿನ್ ಕುಮಾರ್ ಕಟೀಲ್ ಅವರೇ? ಎಂದು ಪ್ರಶ್ನಿಸಿದ್ದಾರೆ.
ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲ ಸೀತಾರಾಮನ್ ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ ನಳಿನ್ ಕುಮಾರ್ ಕಟೀಲ್ ಅವರೇ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷರನ್ನು ಪ್ರಶ್ನಿಸಿದ್ದಾರೆ.
ಇದನ್ನು ಓದಿ: ರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡರೆ, ಚುನಾವಣೆ ಎದುರಿಸಲು ಸಿದ್ಧರಿದ್ದೇವೆ: ಸಿದ್ದರಾಮಯ್ಯ
ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ @nsitharaman ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ @nalinkateel ಅವರೇ?
1/2— Siddaramaiah (@siddaramaiah) October 23, 2020




