ವಿದ್ಯಾರ್ಥಿಗಳೇ ಗಮನಿಸಿ: ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆ ಡಿ.20ರವರೆಗೆ ವಿಸ್ತರಣೆ

ಬೆಂಗಳೂರು: 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ…

ಬೆಂಗಳೂರು: 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು.

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಡಿಸೆಂಬರ್ 20, 2024 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ : 8050770005, ಅಥವಾ bcwdhelpline@gmail.com ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.