jujube fruit | ಬಾರೆ ಹಣ್ಣು ಒಂದು ಸಿಹಿ ಹಣ್ಣಾಗಿದ್ದು, ಇದನ್ನು ಒಣಗಿಸಿ ಸಿಹಿತಿಂಡಿಗಳಲ್ಲಿ ಬಳಸಬಹುದು ಅಥವಾ ತಾಜಾ ಮತ್ತು ಆರೋಗ್ಯಕರ ತಿಂಡಿಯಾಗಿ ತಿನ್ನಬಹುದು. ತಾಜಾವಾಗಿ ತಿಂದಾಗ, ಅವು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ ಮತ್ತು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಅಧಿಕವಾಗಿರುತ್ತವೆ.
ಹಿಮೋಗ್ಲೋಬಿನ್ ಮಟ್ಟ ನಿಯಂತ್ರಣ
ಬಾರೆ ಹಣ್ಣಿನಲ್ಲಿ ವಿಟಮಿನ್ ಎ, ಸಿ & ಖನಿಜ ಪೋಷಕಾಂಶಗಳು ಸಮೃದ್ಧವಾಗಿದ್ದು, ಇದು ಸ್ನಾಯುಗಳು, ನರಮಂಡಲ & ಚರ್ಮಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶ ಒದಗಿಸುತ್ತದೆ. ಬೋರೆ ಹಣ್ಣುಗಳಲ್ಲಿರುವ ಪೊಟ್ಯಾಸಿಯಮ್, ರಂಜಕ, ಮ್ಯಾಂಗನೀಸ್, ಕಬ್ಬಿಣ & ಸತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಇದರಲ್ಲಿರುವ ಕಬ್ಬಿಣದ ಅಂಶವು ಹಿಮೋಗ್ಲೋಬಿನ್ ಮಟ್ಟವನ್ನು ನಿಯಂತ್ರಿಸುತ್ತದೆ & ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ.
ಚರ್ಮದ ಆರೋಗ್ಯಕ್ಕೆ ಒಳ್ಳೆಯದು
ಬಾರೆ ಹಣ್ಣುಗಳಲ್ಲಿ ವಿಟಮಿನ್ ಸಿ ಹೇರಳವಾಗಿದ್ದು ಮೈಬಣ್ಣದ ಕಾಂತಿ ಹೆಚ್ಚಿಸುತ್ತದೆ. ಮೊಡವೆ ಇಲ್ಲದಂತೆ ಚರ್ಮವನ್ನು ರಕ್ಷಿಸುತ್ತದೆ. ಈ ಹಣ್ಣನ್ನು ಒಣಗಿಸಿ ತಿನ್ನುವುದರಿಂದ ಇದರಲ್ಲಿರುವ ಕ್ಯಾಲ್ಸಿಯಂ & ರಂಜಕದ ಅಂಶ ಮೂಳೆಗಳನ್ನು ಬಲಪಡಿಸುವುದಲ್ಲದೆ, ಈ ಹಣ್ಣಿನ ಪೇಸ್ಟ್ ಮಾಡಿ ಅದನ್ನು ಚರ್ಮದ ಮೇಲೆ ಹಚ್ಚುವುದರಿಂದ ಗಾಯವು ಗುಣವಾಗುತ್ತದೆ.
ಜೀರ್ಣಕ್ರಿಯೆ ಸುಧಾರಣೆ
ಈ ಹಣ್ಣುಗಳಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆ & ಅಜೀರ್ಣ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಇದರಲ್ಲಿರುವ ಆಂಟಿಆಕ್ಸಿಡೆಂಟ್ ಫೈಟೊಕೆಮಿಕಲ್ಸ್ ಪಾಲಿಸ್ಯಾಕರೈಡ್ಗಳು, ಪ್ಲೇವನಾಯ್ದಳು & ಸಪೋನಿನ್ಗಳು ಉತ್ತಮ ನಿದ್ರೆಗೆ ಸಹಾಯ ಮಾಡುತ್ತವೆ. ಅದಲ್ಲದೆ ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ.
ಹೃದ್ರೋಗಗಳ ಅಪಾಯ ಕಡಿಮೆ
ಬಾರೆ ಹಣ್ಣು ಆಸ್ಟಿಯೋ ಆರ್ಥೈಟಿಸ್ ತಡೆಗಟ್ಟಲು ಸಹಾಯ ಮಾಡುವುದಲ್ಲದೆ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದಲ್ಲದೆ ರಕ್ತ ಪರಿಚಲನೆಯನ್ನು ಸುಧಾರಿಸುತ್ತವೆ. ಇದು ಹೃದಯವನ್ನು ಆರೋಗ್ಯವಾಗಿರಿಸುತ್ತದೆ.
ಕ್ಯಾನ್ಸರ್ ನಿಂದ ದೂರ
ಬಾರೆ ಹಣ್ಣು ತಿನ್ನುವುದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದ್ದಲ್ಲದೆ,ಕೆಲವು ಸಂಶೋಧನೆಗಳು ಹೇಳುವ ಪ್ರಕಾರ, ಇದನ್ನು ತಿನ್ನುವುದರಿಂದ ಕ್ಯಾನ್ಸರ್ ಅಂಶಗಳನ್ನು ದೂರವಿಡಬಹುದಾಗಿದ್ದು,ಇದರ ಅನೇಕ ಉತ್ತಮ ಗುಣಗಳು ಕ್ಯಾನ್ಸರ್ ನಂತಹ ಭಯಾನಕ ಕಾಯಿಲೆಗಳಿಂದ ದೂರವಿಡುತ್ತವೆ.




