Curry leaves | ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆ ಸೇವಿಸುವ ಪ್ರಯೋಜನಗಳು

Curry leaves : ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು (Curry leaves) ಅಗಿಯುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯು ಆ ದಿನಕ್ಕೆ ಸಿದ್ಧವಾಗುತ್ತದೆ ಮತ್ತು ಉಬ್ಬುವುದು, ಗ್ಯಾಸ್ ಅಥವಾ ಮಲಬದ್ಧತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಇದು…

Curry leaves vijayaprabha news

Curry leaves : ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು (Curry leaves) ಅಗಿಯುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯು ಆ ದಿನಕ್ಕೆ ಸಿದ್ಧವಾಗುತ್ತದೆ ಮತ್ತು ಉಬ್ಬುವುದು, ಗ್ಯಾಸ್ ಅಥವಾ ಮಲಬದ್ಧತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಇದು ನಿಮ್ಮ ಕರುಳಿಗೆ ನೈಸರ್ಗಿಕ ಕಿಕ್‌ಸ್ಟಾರ್ಟ್ ಎಂದು ನೀಡುತ್ತದೆ. ದೈನಂದಿನ ಆಹಾರದಲ್ಲಿ ಕರಿಬೇವಿನ ಎಲೆಗಳನ್ನು ಸೇರಿಸುವ ಇನ್ನೊಂದು ಸರಳ ಮಾರ್ಗವೆಂದರೆ ನೀರಿನಲ್ಲಿ ಕುದಿಸಿ ಸರಳವಾದ ಚಹಾ ತಯಾರಿಸುವುದು.

Curry leaves
Benefits of consuming curry leaves on an empty stomach

ರಕ್ತದೊತ್ತಡ ನಿಯಂತ್ರಣ – Blood pressure control

ಕರಿಬೇವಿನ ಎಲೆಗಳಲ್ಲಿ ಪೊಟ್ಯಾಶಿಯಮ್ ಹೆರಳವಾಗಿರುವುದರಿ೦ದ ಇದನ್ನು ನಿತ್ಯ ಖಾಲಿ ಹೊಟ್ಟೆಯಲ್ಲಿ ತಿ೦ದರೆ ಅಧಿಕ ರಕ್ತದೊತ್ತಡವನ್ನು ನಿವಾರಿಸಬಹುದು. ಅಲ್ಲದೆ ಇದನ್ನು ಖಾಲಿ ಹೊಟ್ಟೆಯಲ್ಲಿ ಚೆನ್ನಾಗಿ ಜಗಿದು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆಯ ಅಂಶ ಕಡಿಮೆಯಾಗುತ್ತದೆ.

ಕೊಲೆಸ್ಟ್ರಾಲ್‌ ನಿಯಂತ್ರಣ – Cholesterol Control

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ಸೇವನೆ ಮಾಡುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಿಸುವುದಲ್ಲದೆ, ಹೃದಯದ ಆರೋಗ್ಯವನ್ನು ಸುಧಾರಿಸುವುದಲ್ಲದೆ. ಇನ್ನು, ಕರಿಬೇವಿನ ಎಲೆಗಳಲ್ಲಿ ಬ್ಯಾಕ್ಟಿರಿಯಾ ವಿರೋಧಿ, ಆಂಟಿಫಂಗಲ್, ಆಂಟಿವೈರಲ್ ಗುಣಗಳು ಹೆರಳವಾಗಿದ್ದು, ಚರ್ಮದ ಸಮಸ್ಯೆಗಳನ್ನು ನಿವಾರಿಸಿ, ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ.

Vijayaprabha Mobile App free

ತೂಕ ಇಳಿಕೆಗೆ ಸಹಕಾರಿ – Helps in weight loss

ಕರಿಬೇವಿನ ಎಲೆಗಳಲ್ಲಿ ಕಬ್ಬಿಣಾಂಶ ಅಧಿಕ ಪ್ರಮಾಣದಲ್ಲಿ ಕ೦ಡು ಬರುವುದರಿಂದ ಖಾಲಿ ಹೊಟ್ಟೆಯಲ್ಲಿ ಇದರ ಸೇವನೆ ಮಾಡಿದರೆ ರಕ್ತಹೀನತೆ ಸಮಸ್ಯೆ ದೂರವಾಗುತ್ತದೆ.ಇದರೊಂದಿಗೆ ತೂಕ ಇಳಿಕೆಗೆ ತುಂಬಾ ಪ್ರಯೋಜನಕಾರಿ ಆಗಿದೆ.

ದೃಷ್ಟಿ ಸಮಸ್ಯೆ ದೂರ – Relieves vision problems

ನಿತ್ಯ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ, ದೃಷ್ಟಿ ಸಮಸ್ಯೆಗಳನ್ನು ಕೂಡ ನಿವಾರಿಸುತ್ತದೆ.

ಒತ್ತಡ ನಿವಾರಣೆ – Relieves stress

ಕರಿಬೇವಿನಲ್ಲಿರುವ ಉತ್ಕರ್ಷಣ ನಿರೋಧಕ ಗುಣಗಳು ಆಕ್ಸಿಡೇಟಿವ್ ಒತ್ತಡದಿ೦ದ ಉಪಶಮನ ನೀಡಲು ಸಹಕಾರಿಯಾಗಿದೆ. ಪ್ರತಿದಿನ ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಒತ್ತಡದಿಂದ ಮುಕ್ತರಾಗಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.