Heavy rain : ಫೆಂಗಲ್ ಸೇರಿದಂತೆ ಒಂದರ ಹಿಂದೆ ಒಂದರಂತೆ ಚಂಡಮಾರುತಗಳನ್ನು ಎದುರಿಸಿದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಿದ್ದಿದ್ದು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಮತ್ತೆ ವರುಣನ ಆರ್ಭಟ ಕಂಡು ಬರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಸದ್ಯಕ್ಕೆ ಕರ್ನಾಟಕಕ್ಕೆ ಮಳೆಯಿಂದ ಮುಕ್ತಿ ಸಿಗುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಯಾಕೆಂದರೆ, ಒಂದರ ಹಿಂದೊಂದರಂತೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತಗಳು ಸೃಷ್ಟಿಯಾಗುತ್ತಲೇ ಇವೆ. ಇದೀಗ ಮತ್ತೊಂದು ಸೈಕ್ಲೋನ್ ತಮಿಳುನಾಡಿಗೆ ಅಪ್ಪಳಿಸಲಿದೆ. ಹೀಗಾಗಿ ನಾಳೆಯಿಂದ 3 ದಿನ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ಡಿ. 17 ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಬೀಳಲಿದೆ. ನಂತರ ಡಿ. 19ರಿಂದ ಕರಾವಳಿಯಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಒಣ ಹವೆ ಇದ್ದು, ಹಲವೆಡೆ ಸಾಧಾರಣ ಹಾಗೂ ಕೆಲವೆಡೆ ದಟ್ಟ ಮಂಜು ಮುಸುಕಿನ ವಾತಾವರಣ ಕಂಡು ಬಂದಿದೆ.