ದಾವಣಗೆರೆ: ಚಿಗಟೇರಿ ಜಿಲ್ಲಾ ಜನರಲ್ ಆಸ್ಪತ್ರೆಯ ಮೇಲ್ಛಾವಣಿ ಕುಸಿದು ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿವೆ.
ಗಾಯಗೊಂಡವರನ್ನು ಕಾವೇರಿ (36), ಪ್ರೇಮಾ (46) ಮತ್ತು ಎರಡೂವರೆ ವರ್ಷದ ಮಗು ನೇತ್ರ ಎಂದು ಗುರುತಿಸಲಾಗಿದೆ.
ಗಾಯಗೊಂಡವರು ವಿಜಯನಗರ ಜಿಲ್ಲೆಯ ಹಲವಗಲು ಗ್ರಾಮದವರಾಗಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಬಂಧಿಕರನ್ನು ನೋಡಲು ಆಸ್ಪತ್ರೆಗೆ ಭೇಟಿ ನೀಡಿದ್ದರು. ಸದ್ಯ ಗಾಯಾಳುಗಳು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.