Holiday : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಇಂದಿನಿಂದ 3 ದಿನ ಮಂಡ್ಯದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ (Holiday) ಘೋಷಿಸಲಾಗಿದೆ.
ಇದನ್ನೂ ಓದಿ: Kannada Sahitya Sammelana | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಿದ್ಧ; ಫ್ರೀ ಬಸ್ ವ್ಯವಸ್ಥೆ
ಹೌದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಗಣ್ಯರು ಮತ್ತು ನೋಂದಾಯಿತ ಪ್ರತಿನಿಧಿಗಳು ಮಂಡ್ಯಕ್ಕೆ ಆಗಮಿಸಿದ್ದು, ಅವರಿಗೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ನುಡಿಜಾತ್ರೆಯನ್ನು ಅದ್ಧೂರಿಯಾಗಿ ನಡೆಸಲು ರಾಜ್ಯ ಸರ್ಕಾರ, ಕಸಾಪ ಮತ್ತು ಜಿಲ್ಲಾಡಳಿತ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ.