New Year Ban: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗಿಲ್ಲ ಅವಕಾಶ!

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಅಂದ್ರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ…

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿದೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಅಂದ್ರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರ ಮಟ್ಟದಿಂದ 1,478 ಮೀಟರ್ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಾಸ್ತ ವಿಹಂಗಮ ನೋಟ ನೋಡುವುದಕ್ಕೆ ತುಂಬಾ ಫೇಮಸ್. 

ಇನ್ನು ನಂದಿಗಿರಿಧಾಮದಲ್ಲಿ ಕಾಣಸಿಗುವ ಬೆಳ್ಳಿ ಮೋಡ, ಇಬ್ಬನಿ, ಸುತ್ತಲೂ ಎತ್ತ ನೋಡಿದರೂ ಮುತ್ತಿಕ್ಕುವ ಮಂಜು, ಇಂಥ ಪ್ರಕೃತಿ ಸೊಬಗಿನಲ್ಲಿ ಕುಳಿತು ಹೊಸ ವರ್ಷ 2025ನ್ನು ಸ್ವಾಗತಿಸೋಣ ಅಂತ ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ರು. ಆದ್ರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪಾರ್ಟಿ ಪ್ರಿಯರ ಕನಸಿಗೆ ತಣ್ಣೀರು ಎರಚಿದೆ. ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದೆ.

Vijayaprabha Mobile App free

ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ 2025 ಜನವರಿ 1 ರಂದು ಬೆಳಿಗ್ಗೆ 6 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶವನ್ನೂ ಬಂದ್ ಮಾಡಲಾಗಿದೆ. ಇದ್ರಿಂದ ಪ್ರವಾಸೋದ್ಯಮ ಇಲಾಖೆಗೂ ನಿರ್ಬಂಧದ ಬಿಸಿ ಮುಟ್ಟಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply