ಉಚ್ಚಂಗಿದುರ್ಗ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಸ್ವಂತ ಅಣ್ಣನಿಂದ ಹಲ್ಲೆಗೊಳಗಾದ ತಂಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಸಮೀಪದ ಕರಡಿದುರ್ಗ ಗ್ರಾಮದಲ್ಲಿ ವ್ಯಕ್ತಿಯೊಂದಿಗೆ ಸಂಬಂಧ ಇರಿಸಿಕೊಂಡಿದ್ದರಿಂದ ಕೋಪಗೊಂಡಿದ್ದ ಅಣ್ಣ ಹನುಮಂತ (32) ಹಾಗೂ ಸಹೋದರಿ ರತ್ನಮ್ಮ (28) ಅವರ ನಡುವೆ ಜಗಳ ಏರ್ಪಟ್ಟಿತ್ತು. ಜಗಳ ಅತಿರೇಕಕ್ಕೆ ಹೋಗಿ, ತಂಗಿಯ ಮೇಲೆ ಅಣ್ಣ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ.
ಅರಸೀಕೆರೆ ಗ್ರಾಮ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಹಲ್ಲೆಗೊಳಗಾಗಿದ್ದ ರತ್ನಮ್ಮನನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಪೊಲೀಸರು ಪರಾರಿಯಾಗಿದ್ದ ಆರೋಪಿ ಹನುಮಂತ ನನ್ನು ಬಂಧಿಸಿದ್ದಾರೆ.
ಆದರೆ ಈಗ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರತ್ನಮ್ಮ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಇದನ್ನು ಓದಿ: ಉಚ್ಚಂಗಿದುರ್ಗ: ರಕ್ತ ಹಂಚಿಕೊಂಡವಳ ರಕ್ತ ಚಲ್ಲಿದ ಸೋದರ…!