Heavy rain : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Champions Trophy | ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಫೆಬ್ರವರಿ 23 ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ
ಇನ್ನು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದ್ದು, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ ಜೊತೆಗೆ ಚಳಿಯೂ ಹೆಚ್ಚಾಗಲಿದೆ ಎಂದು ಐಎಂಡಿ ಹೇಳಿದೆ.




