Heavy rain : ಮಳೆಗಾಲ ಹೋಯ್ತು ಚಳಿಗಾಲ ಬಂತು ಎನ್ನುವಷ್ಟರಲ್ಲಿ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಹೌದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 48 ಗಂಟೆಗಳ ಕಾಲ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಹೊಸ ವರ್ಷಕ್ಕೆ ಎಲ್‌ಪಿಜಿ ಗ್ರಾಹಕರಿಗೆ ಗಿಫ್ಟ್: ಸಿಲೆಂಡರ್ ಮೇಲೆ 14.50 ರೂ. ಇಳಿಕೆ
ಇನ್ನು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರಲ್ಲೂ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.




