ಕನ್ನಡದ ಖ್ಯಾತ ನಿರ್ಮಾಪಕ, ನಿರ್ದೇಶಕ ವಿಧಿವಶ

ಬೆಂಗಳೂರು: ಖ್ಯಾತ ಸಿನಿಮಾ ನಿರ್ಮಾಪಕ ಮತ್ತು ನಿರ್ದೇಶಕ 52 ವರ್ಷದ ದಿನೇಶ್ ಗಾಂಧಿ ನಿಧನರಾಗಿದ್ದಾರೆ. ಇತ್ತೀಚಿನ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಿನೇಶ್ ಅವರು ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿನೇಶ್…

ಬೆಂಗಳೂರು: ಖ್ಯಾತ ಸಿನಿಮಾ ನಿರ್ಮಾಪಕ ಮತ್ತು ನಿರ್ದೇಶಕ 52 ವರ್ಷದ ದಿನೇಶ್ ಗಾಂಧಿ ನಿಧನರಾಗಿದ್ದಾರೆ. ಇತ್ತೀಚಿನ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಿನೇಶ್ ಅವರು ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿನೇಶ್ ಗಾಂಧಿ ಅವರು ಕನ್ನಡ ಚಿತ್ರರಂಗಕ್ಕೆ ಹತ್ತು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.

ದಿನೇಶ್ ಅವರ ಅಕಾಲಿಕ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ನಿರ್ದೇಶಕರ ಸಾವಿನಿಂದ ಅವರ ಕುಟುಂಬ, ಸ್ನೇಹಿತರು,  ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ದಿನೇಶ್ ಗಾಂಧಿ ಅವರು ಕನ್ನಡಲ್ಲಿ ನಟ ಕಿಚ್ಚ ಸುದೀಪ್ ಅಭಿನಯದ ವೀರ ಮದಕರಿ, ರವಿಚಂದ್ರನ್ ಅಭಿನಯದ ಹೂ, ಮಲ್ಲಿಕಾರ್ಜುನ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ದಿನೇಶ್ ಗಾಂಧಿ ಅವರ ನಿಧನಕ್ಕೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.