ಅಬುದಾಬಿ: ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ್ದ 154 ರನ್ ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ 18.5 ಓವರ್ ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿ 9 ವಿಕೆಟ್ ಭರ್ಜರಿ ಜಯಭೇರಿ ಬಾರಿಸಿತು. ಚೆನ್ನೈ ಸೂಪರ್ ಕಿಂಗ್ಸ್ ಪರ ಡುಪ್ಲೆಸಿಸ್-48, ಋತುರಾಜ್ ಗಾಯಕ್ವಾಡ್ – 62*, ಅಂಬಟಿ ರಾಯುಡು – 30* ರನ್ ಗಳಿಸಿದರು. ಪಂಜಾಬ್ ಪರ ಕ್ರಿಸ್ ಜೋರ್ಡನ್ 1 ವಿಕೆಟ್ ಪಡೆದರು.
ಇದಕ್ಕೂ ಮುಂಚೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವೆನ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 153 ರನ್ ಗಳಿಸಿತು. ಪಂಜಾಬ್ ಪರ ಕೆ. ಎಲ್ ರಾಹುಲ್-29, ಮಾಯಾಂಕ್ ಅಗರ್ವಾಲ್-26, ಕ್ರಿಸ್ ಗೇಲ್ -12, ಮಂದೀಪ್ ಸಿಂಗ್ -14, ಹಾಗು ದೀಪಕ್ ಹೂಡ-62* ರನ್ ಗಳಿಸಿದರು. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಪರ ಲುಂಗಿ ಎಂಗಿಡಿ 3 ವಿಕೆಟ್, ಠಾಕೂರ್, ತಾಹಿರ್, ಹಾಗು ಜಡೇಜಾ ತಲಾ 1 ವಿಕೆಟ್ ಪಡೆದರು.