ಮುಂಬೈ: ಸೆಲೆಬ್ರಿಟಿಗಳಿಗೆ ತಮ್ಮ ವೃತ್ತಿಯ ಜೊತೆಗೆ ಸೋಷಿಯಲ್ ಮೀಡಿಯಾಗಳು ಕೂಡ ಮುಖ್ಯವಾಗುತ್ತವೆ. ತಮ್ಮನ್ನು ಆರಾಧಿಸುವ ಅಭಿಮಾನಿಗಳಿಗೆ ಹತ್ತಿರವಾಗಲು ಸಾಮಾಜಿಕ ಮಾಧ್ಯಮವು ಪ್ರಮುಖ ಪಾತ್ರ ವಹಿಸುತ್ತದೆ. ಅವರು ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ವಿಷಯಗಳನ್ನು ಈ ವೇದಿಕೆಯ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಸೆಲೆಬ್ರಿಟಿಗಳು ಟ್ವಿಟರ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಲ್ಲಿ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದ್ದಾರೆ.
ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಇನ್ಸ್ಟಾಗ್ರಾಮ್ನಲ್ಲಿ ಭಾರತೀಯ ಸೆಲೆಬ್ರಿಟಿಗಳಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಇಲ್ಲಿಯವರೆಗೆ ನಾಲ್ಕನೇ ಸ್ಥಾನದಲ್ಲಿದ್ದ ನಟಿ ಶ್ರದ್ಧಾ ಕಪೂರ್ ಇನ್ನೊಬ್ಬ ನಟಿ ದೀಪಿಕಾ ಪಡುಕೋಣೆ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲು ಈ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಅನ್ನು ಭಾರತದಲ್ಲಿ ಕೋಟ್ಯಂತರ ಜನರು ಬಳಸುತ್ತಿದ್ದಾರೆ. ಮನರಂಜನೆ, ಸಾಮಾಜಿಕ ಮತ್ತು ಇತರ ವಿಷಯಗಳೊಂದಿಗೆ ಅವರ ಸಂಬಂಧಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಪ್ರಸ್ತುತ ಇನ್ಸ್ಟಾಗ್ರಾಮ್ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಮೊದಲನೇ ಸ್ಥಾನದಲ್ಲಿದ್ದು 82.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ವಿರಾಟ್ ಕೊಹ್ಲಿ ನಂತರ ನಟಿ ಪ್ರಿಯಾಂಕಾ ಚೋಪ್ರಾ 58.1 ಮಿಲಿಯನ್ ಫಾಲೋವರ್ಸ್ ಹೊಂದಿದ್ದು ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು 52.3 ಮಿಲಿಯನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದ ನಟಿ ದೀಪಿಕಾ ಪಡುಕೋಣೆ ಅವರನ್ನು ಹಿಂದಿಕ್ಕಿ ಶ್ರದ್ಧಾ ಕಪೂರ್ 56.4 ಮಿಲಿಯನ್ ಫಾಲೋವರ್ಸ್ ಗಳಿಸಿ ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಇನ್ನು ಅತಿ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿರುವ ಸೆಲೆಬ್ರಿಟಿಗಳ ನಂತರದ ಸ್ಥಾನದಲ್ಲಿ ನಟಿ ಆಲಿಯಾ ಭಟ್ 50.1 ಮಿಲಿಯನ್ ಫಾಲೋವರ್ಸ್, ನೇಹಾ ಕಕ್ಕರ್ 48.2 ಮಿಲಿಯನ್, ಅಕ್ಷಯ್ ಕುಮಾರ್ 46.2 ಮಿಲಿಯನ್, ಜಾಕ್ವೆಲಿನ್ ಫರ್ನಾಂಡೀಸ್ 46.2 ಮಿಲಿಯನ್ ಮತ್ತು ಕತ್ರಿನಾ ಕೈಫ್ 44.8 ಮಿಲಿಯನ್ ಫಾಲೋವರ್ಸ್ ಗಳಿಸಿ ನಂತರದ ಸ್ಥಾನದಲ್ಲಿದ್ದಾರೆ. ನಟರು ಮತ್ತು ಪ್ರಸಿದ್ಧ ವ್ಯಕ್ತಿಗಳಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರು ವಿಶ್ವದಾದ್ಯಂತ 49.7 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ.




