ಡಿಸೆಂಬರ್ನಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ಶಾಸಕನ ಭವಿಷ್ಯ

ಬೆಂಗಳೂರು: ನಾನು ನನ್ನ ರಕ್ತದಲ್ಲಿ ಬೇಕಾದರೂ ಬರೆದುಕೊಡುತ್ತೇನೆ. ಡಿಸೆಂಬರ್ ಅಂತ್ಯದೊಳಗೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸೆಂಬರ್ ಅಂತ್ಯದ ವೇಳೆಗೆ ಡಿ.…

ಬೆಂಗಳೂರು: ನಾನು ನನ್ನ ರಕ್ತದಲ್ಲಿ ಬೇಕಾದರೂ ಬರೆದುಕೊಡುತ್ತೇನೆ. ಡಿಸೆಂಬರ್ ಅಂತ್ಯದೊಳಗೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸೆಂಬರ್ ಅಂತ್ಯದ ವೇಳೆಗೆ ಡಿ. ಕೆ.ಶಿವಕುಮಾರರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು. ಮುಂದಿನ 5 ವರ್ಷಗಳ ಕಾಲ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗುವುದಾಗಿ ಅವರು ಹೇಳಿದರು.

ನಮಗೆ ಬೇರೆ ಪಕ್ಷಗಳ ಶಾಸಕರ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲಿ ಸಾಕಷ್ಟು ಶಾಸಕರು ಇದ್ದಾರೆ.  ಕಾಂಗ್ರೆಸ್ ಹೈ ಕಮಾಂಡ್ ಮೊದಲು ಸಚಿವ ಕೆ. ಎನ್. ರಾಜಣ್ಣ ಅವರ ಬಾಯಿ ಮುಚ್ಚಬೇಕು ಎಂದು ಅವರು ಒತ್ತಾಯಿಸಿದರು.

Vijayaprabha Mobile App free

ಕಾಂಗ್ರೆಸ್ ಹೈ ಕಮಾಂಡ್ಗೆ ರಾಜ್ಯದ ರಾಜಕೀಯ ಘಟನೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದಿದೆ.  ಡಿ. ಕೆ. ಶಿವಕುಮಾರ್ರ ಕಾರ್ಯವೈಖರಿಯೂ ಗೊತ್ತಿದೆ.  ಅವರು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ.  ಹಣವನ್ನು ಖರ್ಚು ಮಾಡಿದ್ದಾರೆ.  ಅವರು ಡಿಸೆಂಬರ್ ಅಂತ್ಯದ ವೇಳೆಗೆ 140 ಶಾಸಕರ ಬೆಂಬಲದೊಂದಿಗೆ  ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.