ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಸ್ ನಾಗ್ಪುರಕ್ಕೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್ ಜಬಲ್ಪುರದ ರಾಮನ್ ಘಾಟಿ ಪ್ರದೇಶದಲ್ಲಿ ಪಲ್ಟಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಹೈದರಾಬಾದ್ ಮೂಲದ ಮಾಲ್ಮಾ (45), ಶುಭಂ ಮೆಶ್ರಮ್ (28) ಮತ್ತು ಅಮೋಲ್ ಖೋಡೆ (42) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಲಖ್ನಾದನ್ ಪಟ್ಟಣ ಮತ್ತು ಜಬಲ್ಪುರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.