ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದ್ದು, ಸಮಾಲೋಚಕರು, ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು, ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು ಸೇರಿದಂತೆ ಒಟ್ಟು 25 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಕಡೆ ದಿನ ನ.30 ಆಗಿದೆ.
ಹುದ್ದೆಗಳ ವಿವರ:
ಒಟ್ಟು ಹುದ್ದೆಗಳು: 25
1) ಸಮಾಲೋಚಕರು : 02
2) ಘನ ಮತ್ತು ದ್ರವ ತಾಜ್ಯ ನಿರ್ವಹಣೆ ಸಮಾಲೋಚಕರು : 01
3) ಜಿಲ್ಲಾ ಯೋಜನಾ ವ್ಯವಸ್ಥಾಪಕ : 03
4) ಜಿಲ್ಲಾ MIS ಸಮಾಲೋಚಕರು : 08
5) ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು: 02
6) ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು: 04
7) ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಾಲೋಚಕರು: 01
8) ಮಾನವ ಸಂಪನ್ಮೂಲ ಅಭಿವೃದಿ : 01
ವಿದ್ಯಾರ್ಹತೆ : ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಇಂಜಿನಿಯರಿಂಗ್, ಸ್ನಾತಕೋತ್ತರ, ಪದವಿ ವಿದ್ಯಾರ್ಹತೆ ಜೊತೆಗೆ, ಕೆಲವು ೨ ರಿಂದ ೩ ವರ್ಷ ಅನುಭವ ಹೊಂದಿರಬೇಕು
ವಯೋಮಿತಿ: ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.
ಗುತ್ತಿಗೆಯ/ ಹೊರಗುತ್ತಿಗೆ ಅವಧಿ: ಮೇಲಿನ ಹುದ್ದೆ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ನಂತರ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಕಾಲಕಾಲಕ್ಕೆ ಅನುಗುಣವಾಗಿ ನವೀಕರಿಸಲಾಗುವುದು. ಇನ್ನು ಅಭ್ಯರ್ಥಿಯ ಕಾರ್ಯಕ್ಷಮತೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿದ್ದರೆ ಕರಾರು ಒಪ್ಪಂದವನ್ನು ಒಂದು ತಿಂಗಳ ನೋಟೀಸ್ ನೀಡಿ ರದ್ದುಪಡಿಸಲಾಗುವುದು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 30-11-2020
ಹುದ್ದೆಗಳಿಗೆ ಹೆಚ್ಚಿನ ಮಾಹಿತಿಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ:
https://rdpr.karnataka.gov.in/
ಹುದ್ದೆಗಳ ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಪಡೆಯಲು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಿ:
https://rdpr.karnataka.gov.in/storage/pdf-files/Recruitment/RWS_13_11_20.pdf