Dalit community internal reservation : ಕರ್ನಾಟಕದಲ್ಲಿ ದಲಿತ ಸಮುದಾಯಕ್ಕೆ (Dalit community) ಒಳ ಮೀಸಲಾತಿ (Internal reservation) ಬಹುತೇಕ ಫೈನಲ್ ಆಗಿದೆ.
ಹೌದು, ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸ೦ಪುಟ ಸಭೆಯಲ್ಲಿ ಎಲ್ಲಾ ಪರಿಶಿಷ್ಟಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವಾಗಿದೆ. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ 5 ವಿಂಗಡಣೆ ಮಾಡಲಾಗಿತ್ತು. ಆದರೆ ಸರ್ಕಾರ, 3 ಗುಂಪುಗಳಾಗಿ ವರ್ಗೀಕರಣ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಯಾರಿಗೆ ಎಷ್ಟು?

18 ಜಾತಿಗಳಿರುವ ಎಡಗೈ ಸಮುದಾಯಕ್ಕೆ 6% ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ 6% ಮೀಸಲಾತಿ ಹಾಗು 63 ಜಾತಿಗಳಿರುವ ಇತರ ಸಮುದಾಯಕ್ಕೆ 5% ಮೀಸಲಾತಿ ನೀಡುವ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಬಹುತೇಕ ಅಂತಿಮವಾಗಿದ್ದು, ಈ ಕುರಿತಂತೆ ಇಂದಿನ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಲಿದ್ದಾರೆ. ಇನ್ನು ಈ ಕುರಿತು ಎರಡು ದಿನದಲ್ಲಿ ಒಳಮೀಸಲಾತಿ ಸಂಬಂಧ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ.
ದಲಿತ ಎಡಗೈ ಜಾತಿಗಳು
ಭಾಂಬಿ, ಅಸದರು, ಅಸೋಡಿ, ಚಮಡಿಯಾ, ಚಮರ್, ಚಂಬರ, ಚಮಗಾರ, ಹರಳಯ್ಯ, ಹರಳಿ, ಖಾಲ್ಪ, ಮಚಿಗಾರ, ಮೋಚಿಗಾರ, ಮಾದರ, ಮಾದಿಗ, ಮೋಚಿ, ಮುಚ್ಚಿ, ತೆಲುಗು ಮೋಚಿ, ಕಾಮತಿ ಮೋಚಿ, ರಾಣಿಗಾರ್, ರೋಹಿದಾಸ್, ರೋಹಿತ್, ಸಮ್ಹರ್, ಹಕ್ಕಳಯ್ಯ, ಧೋರ್ಕ, ಹಕ್ಕಳಯ್ಯ, ಧೋರ್ಕಾ ಹಲಸ್ವರ, ಹಸ್ತ, ಕಡಯ್ಯನ್, ಕೆಸ್ಮರಿಸ್, ಕೊಲುಪುಲ್ವಂಡಿಯು, ಕುಟುಂಬನ್, ಮಾದಿಗ, ಮಾವಿಲನ್, ಮೊಗೇರ್, ಪಂಚಮ, ಪನ್ನಿಯಾಂಡಿ, ಪರಯ್ಯನ್, ಪರಯ, ಸಮಗಾರ ಮತ್ತು ಸಾಂಬನ್.
ದಲಿತ ಬಲಗೈ ಜಾತಿಗಳು
ಅಣಮುಕ್, ಅರೆ ಮಾಳ, ಅರವ ಮಾಳ, ಬಲಗೈ, ಛಲವಾದಿ, ಚಲವಾದಿ, ಚನ್ನಯ್ಯ, ಪಲ್ಲನ್, ಹೊಲಯ, ಹೊಲೆಯ, ಹೊಲೆಯ, ಮಹ್ಯವಂಶಿ, ಧೇಡ್, ವಂಕರ್, ಮಾರು ವಂಕರ್, ಮಾಳ, ಮಲ ಹಣ್ಣಾಯಿ, ಮಾಳ ಜಂಗಮ, ಮಾಳ ಮಾಸ್ತಿ, ಮಲ ಮಾರಾಟ, ನೆಟ್ಕಣಿ, ಮಹಾರ್, ತರಲ್, ಧೇಳು, ದೇಗುಲ ಮೇಗುಂದ,ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ.
ಇತರೆ 5% ಮೀಸಲಾತಿ
ಬಕುಡ; ಬಂಜಾರ, ಲಂಬಾಣಿ, ಲಂಬಾಡ, ಲಂಬಾಡಿ, ಲಮಾಣಿ, ಸುಗಾಲಿ, ಸುಕಾಲಿ; ಭೋವಿ, ಓಡ್, ಒಡ್ಡೆ, ವಡ್ಡರ, ವಡ್ಡರ, ವಡ್ಡರ, ವಡ್ಡರ, ಕಲ್ಲುವಡ್ಡರ, ಬೋವಿ (ಬೆಸ್ತರಲ್ಲದ), ಮಣ್ಣುವಡ್ಡರ; ಎಲ್ಲಮಾಳ್ವಾರ್, ಯೆಲ್ಲಮ್ಮಲವಾಂಡ್ಲು; ಕೊರಚ, ಕೊರಚಾರ್; ಕೊರಮ, ಕೊರವ, ಕೊರವರ, ಲಿಂಗಾಡರ್, ಮುಕ್ರಿ, ಮುಂಡಾಲ, ಪಂಬದ, ಸಪಾರಿ, ತಿರ್ಗರ್ ಮತ್ತು ತಿರ್ಬಂದ.
ಸಂಭ್ರಮಾಚರಣೆ
ದಲಿತ ಸಮುದಾಯದ ಒಳಮೀಸಲಾತಿ ಸಂಬಂಧ ಸಿದ್ದರಾಮಯ್ಯ ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದ್ದಕ್ಕೆ ದಲಿತ ನಾಯಕರು ಸಂತಸಗೊಂಡಿದ್ದಾರೆ. ಹೆಚ್.ಆಂಜನೇಯ ಬೆಂಬಲಿಗರು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದು ಅಲ್ಲದೇ ಸಿದ್ದರಾಮಯ್ಯನವರಿಗೆ ಸನ್ಮಾನಿಸಿದರು. ಇನ್ನು ಫ್ರೀಡಂ ಪಾರ್ಕ್ ಬಳಿಯೂ ಸಹ ದಲಿತ ಸಮುದಾಯದವರು ಸಿಹಿ ಹಂಚಿ ಸಂಭ್ರಮಿಸಿದರು.



