Heavy rains | ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ನೆಚ್ಚರಿಕೆ: 9 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

Heavy rains । ರಾಜ್ಯದ ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ…

Heavy rains

Heavy rains । ರಾಜ್ಯದ ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗಣೇಶ ಚತುರ್ಥಿ ಬಳಿಕ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಷ್ಟೇ ಅಲ್ಲ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ವಿಜಯಪುರ, ರಾಯಚೂರು, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆಯಲ್ಲಿ ಕೂಡ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Vijayaprabha Mobile App free

ಮಳೆಗೆ ಉತ್ತರ ಭಾರತದ ರಾಜ್ಯಗಳು ತತ್ತರ : ಪ್ರವಾಹ ಪರಿಸ್ಥಿತಿ

ಇನ್ನು, ರಾಜಸ್ಥಾನ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ರಾಜ್ಯಗಳ ಕೆಲವು ಭಾಗಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದ್ದು, ರಸ್ತೆಗಳು, ಸೇತುವೆಗಳಿಗೆ ಹಾನಿಯಾಗಿದೆ.

ರಾಜಸ್ಥಾನದ ಹಲವು ಜಿಲ್ಲೆಗಳಲ್ಲಿ ಕೂಡ ಭಾನುವಾರ ಧಾರಾಕಾರ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆಯಿಂದ ಸಂಭವಿಸಿದ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದು, ನೂರಾರು ಜನರನ್ನು ಸ್ಥಳಾಂತರಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.