BPL card | ಅನರ್ಹ BPL ಕಾರ್ಡ್​ದಾರರಿಗೆ ಡವಡವ; 12 ಲಕ್ಷ ಕಾರ್ಡ್​ಗಳು ರದ್ದು?

BPL cards : ಬಡ ಹಾಗೂ ಮಧ್ಯಮ ವರ್ಗದ ಜನರು, ಉಣ್ಣಲು ಗತಿ ಇಲ್ಲದವರಿಗಿಂತ ಹೆಚ್ಚಾಗಿ ಬಿಪಿಎಲ್ ಕಾರ್ಡ್​ಗಳು ಅನರ್ಹರ ಕೈಸೇರಿರುವುದು ಗೊತ್ತಾಗಿದ್ದು, ಮೇಜರ್ ಸರ್ಜರಿಗೆ ಆಹಾರ ಇಲಾಖೆ ಮುಂದಾಗಿದೆ. ಹೌದು, ಸುಳ್ಳು ಮಾಹಿತಿ…

BPL card cancellation vijayaprabhanews

BPL cards : ಬಡ ಹಾಗೂ ಮಧ್ಯಮ ವರ್ಗದ ಜನರು, ಉಣ್ಣಲು ಗತಿ ಇಲ್ಲದವರಿಗಿಂತ ಹೆಚ್ಚಾಗಿ ಬಿಪಿಎಲ್ ಕಾರ್ಡ್​ಗಳು ಅನರ್ಹರ ಕೈಸೇರಿರುವುದು ಗೊತ್ತಾಗಿದ್ದು, ಮೇಜರ್ ಸರ್ಜರಿಗೆ ಆಹಾರ ಇಲಾಖೆ ಮುಂದಾಗಿದೆ.

ಹೌದು, ಸುಳ್ಳು ಮಾಹಿತಿ ನೀಡಿ ಅಕ್ರಮವಾಗಿ ರೇಷನ್ ಕಾರ್ಡ್​ಗಳನ್ನು ಪಡೆದವರಿಗೆ ಈಗ ಡವಡವ ಶುರುವಾಗಿದ್ದು, ಬಡ, ಮಧ್ಯಮ ವರ್ಗದ ಜನರಿಗಿಂತ ಹೆಚ್ಚಾಗಿ BPL ಕಾರ್ಡ್​ಗಳು ಅನರ್ಹರ ಕೈಸೇರಿವೆ ಎನ್ನಲಾಗಿದೆ.

BPL card

Vijayaprabha Mobile App free

ರಾಜ್ಯದಲ್ಲಿ ವಿತರಣೆ ಮಾಡಲಾಗಿರುವ 1.50 ಕೋಟಿಗೂ ಹೆಚ್ಚಿನ ಕಾರ್ಡ್​​ಗಳಲ್ಲಿ ಸುಮಾರು ಒಟ್ಟು 12,68,097 ಲಕ್ಷ ಅನರ್ಹ, ಅನುಮಾನಾಸ್ಪದ ಎಂದು ಪಟ್ಟಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಮೇಜರ್ ಸರ್ಜರಿಗೆ ಮುಂದಾಗಿದ್ದು, ಕೆಲವೇ ದಿನಗಳಲ್ಲಿ ಲಕ್ಷಾಂತರ ಕಾರ್ಡ್​ಗಳು ರದ್ದಾಗುವುದು ಬಹುತೇಕ ಖಚಿತವಾಗಿದ್ದು, ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳು ಚುರುಕು ಪಡೆದಿವೆ ಎನ್ನಲಾಗಿದೆ. ಇನ್ನು ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ BPL ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ.

BPL ಕಾರ್ಡ್‌ಗಳನ್ನ ರದ್ದು ಮಾಡಲ್ಲ: ಸಚಿವ ಮುನಿಯಪ್ಪ

Minister Muniyappa

ಯಾವುದೇ ಅನರ್ಹ BPL ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ, BPLನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, APLಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ, ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.