Teachers recruitment | ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಮತ್ತೆ ಹೆಚ್ಚುವರಿಯಾಗಿ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಹೌದು, ಶೀಘ್ರದಲ್ಲೇ 18,500 ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈಗಾಗಲೇ 13,500 ಶಿಕ್ಷಕರ ನೇಮಕಾತಿ ಮಾಡಲಾಗಿದೆ. ನಮ್ಮ ಸರ್ಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಬದ್ಧವಾಗಿದೆ.
ಶೀಘ್ರದಲ್ಲೇ ಇನ್ನೂ 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಇದರಲ್ಲಿ ಅನುದಾನಿತ & ಸರ್ಕಾರಿ ಶಾಲೆಗಳಿಗೂ ಸಮಾನ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದು, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಅಲ್ಲದೇ ನೂತನವಾಗಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದರು. ಬಿಜೆಪಿ ಸರ್ಕಾರವು ಕೇವಲ 5,428 ಶಿಕ್ಷಕರನ್ನು ನೇಮಿಸಿತ್ತು ಎಂದೂ ಅವರು ಹೇಳಿದರು.




