ದೀಪಾವಳಿ ಹಬ್ಬ.. ಪ್ರಯಾಣಿಕರಿಗೆ ಗುಡ್‌ನ್ಯೂಸ್‌

Train passengers:ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರಕ್ಕೆ ವಿಶೇಷ ರೈಲು ಸಂಚರಿಸಲಿದೆ. ಹೌದು, ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈರುತ್ಯ ರೈಲ್ವೆಯು ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ –…

Train passengers:ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರಕ್ಕೆ ವಿಶೇಷ ರೈಲು ಸಂಚರಿಸಲಿದೆ.

ಹೌದು, ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈರುತ್ಯ ರೈಲ್ವೆಯು ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ & ಎಸ್ಎಂವಿಟಿ ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು–ವಿಜಯಪುರ ಎಕ್ಸ್‌ಪ್ರೆಸ್; ಎಲ್ಲೆಲ್ಲಿ ನಿಲುಗಡೆ?

ಮಾರ್ಗದಲ್ಲಿ, ಈ ರೈಲುಗಳು (06245/46) ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲ್ಲಲಿವೆ. ಈ ರೈಲು ಸಹ ರೈಲು ಸಂಖ್ಯೆ 07345 ರಂತೆಯೇ 18 ಬೋಗಿಗಳ ಸಂಯೋಜನೆಯನ್ನು ಹೊಂದಿರಲಿವೆ.

Vijayaprabha Mobile App free

ರೈಲು ಸಂಖ್ಯೆ 06245 ಎಸ್ಎಂವಿಟಿ ಬೆಂಗಳೂರು –ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 17 ರಂದು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 02:05 ಗಂಟೆಗೆ ವಿಜಯಪುರ ತಲುಪಲಿದೆ. ರೈಲು ಸಂಖ್ಯೆ 06246 ವಿಜಯಪುರ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 22 ರಂದು ವಿಜಯಪುರದಿಂದ ಸಂಜೆ 07:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 11:15 ಗಂಟೆಗೆ ಎಸ್ಎಂವಿಟಿ ಬೆಂಗಳೂರನ್ನು ತಲುಪಲಿದೆ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.