Diwali Festival Guidelines : ದೀಪಾವಳಿ ಹಬ್ಬಕ್ಕೆ ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೌದು, ರಾಜ್ಯಾದ್ಯಂತ ಕೇವಲ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದ್ದು, ನಿಗದಿತ ಸಮಯದ ನಂತರ ಪಟಾಕಿ ಸಿಡಿಸುವುದನ್ನು ಮತ್ತು ನಿಷೇಧಿತ ಪಟಾಕಿಗಳ ಮಾರಾಟವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.
ದೀಪಾವಳಿ ಪಟಾಕಿ ಹಾರಿಸಲು ಕಟ್ಟುನಿಟ್ಟಿನ ಮಾರ್ಗಸೂಚಿಗಳೇನು?
- ರಾಜ್ಯದಲ್ಲಿ ಕೇವಲ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅನುಮತಿ
- ರಾತ್ರಿ 10 ಗಂಟೆಯ ನಂತರ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧ
- ಅತಿಯಾದ ಹೊಗೆ ಮತ್ತು ಶಬ್ದವನ್ನು ಉಂಟುಮಾಡುವ ಪಟಾಕಿಗಳಿಗೆ ನಿರ್ಬಂಧ
- ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವ ಅಥವಾ ಸಂಗ್ರಹಿಸಿಟ್ಟವರ ಮೇಲೆ ಪರಿಸರ ಕಾಯಿದೆಯಡಿ ಮೊಕದ್ದಮೆ
- ನಿಯಮಗಳ ಪಾಲನೆ ಖಚಿತಪಡಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಆದೇಶ ನೀಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



