ರಾಜ್ಯದಲ್ಲಿ ಇಂದು & ನಾಳೆ ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

Heavy rain | ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಮುಂದಿನ 2 ದಿನ ಉತ್ತರ ಕನ್ನಡ,…

Heavy rain

Heavy rain | ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಮುಂದಿನ 2 ದಿನ ಉತ್ತರ ಕನ್ನಡ, ದಕ್ಷಿಣ ಕನ್ನಡ ‍ ಉಡುಪಿ ಜಿಲ್ಲೆಗಳಲ್ಲಿ 30-40 ಕೀಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.