Cyclone Monta effect | ಮೊಂತಾ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆ ಭಾರತೀಯ ರೈಲ್ವೇ 100ಕ್ಕೂ ಅಧಿಕ ರೈಲುಗಳನ್ನು ರದ್ದುಗೊಳಿಸಿದೆ. ಜೊತೆಗೆ 30ಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದಾಗಿವೆ.
ಹೌದು, ಮೊಂತಾ ಚಂಡಮಾರುತದ ಮುನ್ನೆಚ್ಚರಿಕೆ ಕ್ರಮವಾಗಿ, ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಭಾರತೀಯ ರೈಲ್ವೇ 100ಕ್ಕೂ ಅಧಿಕ ರೈಲು ಸೇವೆಗಳನ್ನು ರದ್ದುಗೊಳಿಸಿದೆ.
ಇನ್ನೂ ಆಂಧ್ರದಲ್ಲಿ 30ಕ್ಕೂ ಹೆಚ್ಚು ಫ್ಲೈಟ್‌ಗಳ ಹಾರಾಟ ಬಂದ್ ಆಗಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಆಂಧ್ರಪ್ರದೇಶದ ಹಲವು ನಗರಗಳ ನಡುವಿನ ವಿಮಾನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




