Actor Govinda collapsed has been hospitalized | ಬಾಲಿವುಡ್ ಮತ್ತೊಬ್ಬ ಹಿರಿಯ ನಟ ಗೋವಿಂದ (Govinda) (61) ಮುಂಬೈನ ಕ್ರಿಟಿಕೇರ್ ಆಸ್ಪತ್ರೆಗೆ ( CritiCare Hospital in Mumbai) ದಾಖಲಾಗಿದ್ದಾರೆ.
ಹೌದು, ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಈ ಮಧ್ಯೆ ಬಾಲಿವುಡ್ ನಟ ಗೋವಿಂದ ಕೂಡ ಆಸ್ಪತ್ರೆ ಸೇರಿದ್ದಾರೆ.
ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟ ಧರ್ಮೇಂದ್ರ ಅವರನ್ನು ಖುದ್ದಾಗಿ ಭೇಟಿ ಮಾಡಿದ್ದ ಗೋವಿಂದ, ನಿನ್ನೆ ತಡರಾತ್ರಿಯಲ್ಲಿ ಜುಹುವಿನ ತಮ್ಮ ನಿವಾಸದಲ್ಲಿ ಕುಸಿದು ಬಿದ್ದಿದ್ದಾರೆ. ರಾತ್ರಿ 1 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಲವು ಪರೀಕ್ಷೆಗಳನ್ನು ಮಾಡಿಸಲಾಗಿದ್ದು, ಅವುಗಳ ರಿಪೋರ್ಟ್ ಬಂದ ಬಳಿಕವಷ್ಟೇ ಅವರ ಅನಾರೋಗ್ಯಕ್ಕೆ ಕಾರಣ ಏನೆಂದು ತಿಳಿದುಬರಲಿದೆ.




