Dharmendra health Update : ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಬುಧವಾರ ಡಿಸ್ಚಾರ್ಜ್ ಮಾಡಿ ಮನೆಗೆ ಕರೆತರಲಾಯಿತು. ಈಗ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಹೌದು, ನಟಿ , ಸಂಸದೆ ಹೇಮಾ ಮಾಲಿನಿ ಅವರು ಧರ್ಮೇಂದ್ರ ಅವರ ಆರೋಗ್ಯದ ಬಗ್ಗೆ ಸುಭಾಷ್ ಕೆ. ಝಾ ಅವರೊಂದಿಗೆ ಚರ್ಚಿಸಿದ್ದು, ʻಧರ್ಮೇಂದ್ರ ಅವರ ಆರೋಗ್ಯ ನಮಗೆ ಕಳವಳಕಾರಿ ವಿಷಯವಾಗಿದೆ. ಮಕ್ಕಳು ನಿದ್ದೆ ಮಾಡಿಲ್ಲ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಕ್ಕೆ ಅವರಿಗೆ ಸಮಾಧಾನವಾಗಿದೆ. ಉಳಿದೆಲ್ಲವೂ ದೇವರ ಕೈಯಲ್ಲಿದೆʼ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



