Darshan bail | ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆಗಸ್ಟ್ ತಿಂಗಳಿಂದ ಮತ್ತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
ಹೌದು,, ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾ ಮಾಡಿದ ನಂತರ ನಟ ದರ್ಶನ್ ಆಗಸ್ಟ್ 14 ರಂದು ಮತ್ತೆ ಜೈಲು ಸೇರಿದ್ದರು. ಇದೇ ಜನವರಿ 14ಕ್ಕೆ ಜೈಲು ಸೇರಿ 6 ತಿಂಗಳು ಪೂರ್ಣಗೊಳ್ಳಲಿದ್ದು, ನಂತರ ದರ್ಶನ್ ಜಾಮೀನಿಗಾಗಿ ಮತ್ತೆ ಅರ್ಜಿ ಸಲ್ಲಿಸುವ ಸಾಧ್ಯತೆ ಹೆಚ್ಚಿದೆ.
ಕಳೆದ ವರ್ಷ ಸಂಕ್ರಾಂತಿಯನ್ನು ಕುಟುಂಬದೊಂದಿಗೆ ಆಚರಿಸಿದ್ದ ದರ್ಶನ್, ಈ ವರ್ಷ ಸಂಕ್ರಾಂತಿಯ ನಂತರ ಆಚರಿಸುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಕಾನೂನಿನ ಬಲದಿಂದ ದರ್ಶನ್ ಅವರನ್ನು ಹೊರತರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.




