ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹೌದು ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.
ಹವಮಾನ ಇಲಾಖೆ ನೀಡಿರುವ ಸೂಚನೆ ಪ್ರಕಾರ, ಡಿಸೆಂಬರ್ 17ರಿಂದ ಡಿಸೆಂಬರ್ 19 ರವರೆಗೆ ಕೊಡಗು, ಹಾಸನ, ಮಂಡ್ಯ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ರಾಮನಗರ, ತುಮಕೂರು, ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



