ಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ, ಅವರು ನಡೆದಿದ್ದೇ ದಾರಿ; ಮಾಜಿ ಸಚಿವ ರಾಮಲಿಂಗ ರೆಡ್ಡಿ ಕಿಡಿ

ಬೆಂಗಳೂರು : ಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ ಅವರು ನಡೆದಿದ್ದೇ ದಾರಿ ಎಂದು ತಿಳಿದುಕೊಂಡಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದ್ದಾರೆ. ವಿರೋಧ ಪಕ್ಷಗಳನ್ನು ಮಟ್ಟ ಹಾಕುವುದಕ್ಕೆ ಹೊರಟಿದ್ದಾರೆ.ಎಲ್ಲರನ್ನು…

ramalinga reddy vijayaprabha news

ಬೆಂಗಳೂರು : ಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ ಅವರು ನಡೆದಿದ್ದೇ ದಾರಿ ಎಂದು ತಿಳಿದುಕೊಂಡಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದ್ದಾರೆ.

ವಿರೋಧ ಪಕ್ಷಗಳನ್ನು ಮಟ್ಟ ಹಾಕುವುದಕ್ಕೆ ಹೊರಟಿದ್ದಾರೆ.ಎಲ್ಲರನ್ನು ಆಮಿಷ ತೋರಿಸಿ ಬಿಜೆಪಿಗೆ ಸೆಳೆಯುತ್ತಿದ್ದಾರೆ.ಪ್ರಜಾಪ್ರಭುತ್ವದಲ್ಲಿ ಆಡಳಿತ, ವಿರೋಧ ಪಕ್ಷ ಇರಬೇಕು,
ಆದರೆ ತಮ್ಮ ಲೋಪ ಮುಚ್ಚಿಕೊಳ್ಳಲು ಆಮಿಷ ಒಡ್ಡುತ್ತಿದ್ದಾರೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಎಲ್ಲಿ ನೋಡಿದರು ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ರಾಮಲಿಂಗ ರೆಡ್ಡಿ ಹೇಳಿದ್ದಾರೆ.

ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದಾರೆ. ಒಬ್ಬರಿಗೂ ಮೋದಿ ಮುಂದೆ ಮಾತನಾಡುವ ತಾಕತ್ತಿಲ್ಲ. ಕೇಂದ್ರ ಸರ್ಕಾರ ನಮ್ಮ ಪಾಲಿನ GST ಹಣ ಕೊಟ್ಟಿಲ್ಲ. ನೆರೆ, ಬರದ ಹಣ ಕೊಡಲು ಕೇಂದ್ರಕ್ಕೆ ಸಾಧ್ಯವಾಗಿಲ್ಲ.ನಮ್ಮ ಹಣ ಕೇಳಿದ್ರೆ RBI ಬಳಿ ಸಾಲ ಮಾಡಿ ಅಂತಾರೆ. ರೈತರ ಹೋರಾಟಕ್ಕೆ ಖಾಲಿಸ್ತಾನದ ಬಣ್ಣ ಕಟ್ಟಿದ್ದಾರೆ. ಹೀಗಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡಬೇಕಿದ್ದು, ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ರಾಮಲಿಂಗ ರೆಡ್ಡಿ ಹೇಳಿದ್ದಾರೆ.

Vijayaprabha Mobile App free

ಯಾವ ಕಚೇರಿಗೆ ಹೋದರೂ ಹಣವಿಲ್ಲದೆ ಕೆಲಸ ಆಗ್ತಿಲ್ಲ. ಈ ಹಿಂದೆ ಈ ರೀತಿಯಾಗಿ ಇರಲಿಲ್ಲ ಅದಕ್ಕೆ ಮಿತಿ ಇತ್ತು. ಆದರೆ ಈಗ ಭ್ರಷ್ಟಾಚಾರ ಮಿತಿ ಮೀರಿ ಹೋಗಿದೆ. ಬಿಜೆಪಿ ಸರ್ಕಾರ ರೈತ ವಿರೋಧಿ ಕಾಯ್ದೆ ಜಾರಿ ಮಾಡಿದೆ. ಅಂಬಾನಿ ಮೊಮ್ಮಗನನ್ನು ನೋಡಲು ಮೋದಿ ಹೋಗ್ತಾರೆ. ಆದರೆ ಪ್ರತಿಭಟನ ನಿರತ ರೈತರ ಜತೆ ಮಾತನಾಡಿಲ್ಲ ಎಂದು ಮಾಜಿ ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.