ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆ,ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆಯಿದ್ದು ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಿನ್ನೆಯೂ ಸಹ ಹಲವೆಡೆ ಉತ್ತಮ ಮಳೆಯಾಗುದ್ದು,ಉತ್ತರ ಒಳನಾಡಿನ ವಿವಿಧೆಡೆ ಸೇರಿದಂತೆ ರಾಜ್ಯದ ಹಲವೆಡೆ ಜ.12 ರವರೆಗೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.