ಹರಪ್ಪನಹಳ್ಳಿ: ದಾವಣಗೆರೆಯ ಸಮೀಪದ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಬಳಿ ಇರುವ ಮಾಜಿ ಶಾಸಕ ಎಸ್.ಎಸ್ ಮಲ್ಲಿಕಾರ್ಜುನ ಅವರ ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಬಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಶಾಮನೂರು ಸಕ್ಕರೆ ಕಾರ್ಖಾನೆಯಲ್ಲಿ ಈ ಘಟನೆ ಸಂಭವಿಸಿದ್ದು ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಬೆಳಗ್ಗೆ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ಬೆಂಕಿ ಕಾಣಿಸಿಕೊಂಡ ಪರಿಣಾಮ ಆಲ್ಕೋಹಾಲ್ ತುಂಬಿದ ೨೨ ಟ್ಯಾಂಕ್ ಗಳಿಗೆ ಬೆಂಕಿ ಬಿದ್ದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಎಲ್ಎಂ ನಂದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.