ರಾಷ್ಟ್ರಕವಿ ಕುವೆಂಪು ಹುಟ್ಟಿದ ಜಿಲ್ಲೆಯಲ್ಲೇ ಕನ್ನಡಕ್ಕೆ ನೆಲೆ ಇಲ್ಲದಂತಾಗಿದೆ; ಬೇಸರ ವ್ಯಕ್ತಪಡಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಹಿಂದಿ ಹೇರಿಕೆಯನ್ನು ವಿರೋಧಿಸಿದ್ದ ರಾಷ್ಟ್ರಕವಿ ಕುವೆಂಪು ಹುಟ್ಟಿದ ಜಿಲ್ಲೆಯಲ್ಲೇ ಕನ್ನಡಕ್ಕೆ ಸಿಗದಂತಾಗಿದೆ, ತ್ರಿಭಾಷಾ ಸೂತ್ರದಂತೆ ಕನ್ನಡ ಫಲಕವನ್ನು ಅಳವಡಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ನಟ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ…

Nikhil kumaraswamy

ಬೆಂಗಳೂರು: ಹಿಂದಿ ಹೇರಿಕೆಯನ್ನು ವಿರೋಧಿಸಿದ್ದ ರಾಷ್ಟ್ರಕವಿ ಕುವೆಂಪು ಹುಟ್ಟಿದ ಜಿಲ್ಲೆಯಲ್ಲೇ ಕನ್ನಡಕ್ಕೆ ಸಿಗದಂತಾಗಿದೆ, ತ್ರಿಭಾಷಾ ಸೂತ್ರದಂತೆ ಕನ್ನಡ ಫಲಕವನ್ನು ಅಳವಡಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ನಟ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಶಿವಮೊಗ್ಗದ ಅರ್.ಎ.ಎಫ್ ಘಟಕದ ಶಂಕು ಸ್ಥಾಪನೆ ಕಾರ್ಯಕ್ರಮವನ್ನು ವೀಕ್ಷಿಸುವಾಗ ಈ ಕಾರ್ಯಕ್ರಮ ಭದ್ರಾವತಿಯ ಬದಲು ದೆಹಲಿಯಲ್ಲಿ ನಡೆದಂತಿತ್ತು. ಒಂದು ಅಕ್ಷರವೂ ಕನ್ನಡ ಪದ ಬಳಕೆ ಮಾಡದೇ ಮಾನ್ಯ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಶಂಕುಸ್ಥಾಪನೆ ನೆರವೇರಿಸಿರುವುದು ಕೇಂದ್ರ ಸರ್ಕಾರದ ಕನ್ನಡ ವಿರೋಧಿ ಧೋರಣೆಯನ್ನು ತೋರಿಸುತ್ತದೆ.

‘ಇಂಗ್ಲೀಷ್ ಮರದ ದೊಣ್ಣೆಯಾದರೆ ಹಿಂದಿ ಕಬ್ಬಿಣದ ಸಲಾಕೆ’ ಎಂದು ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸಿದ್ದ ರಾಷ್ಟ್ರಕವಿ ಕುವೆಂಪು ಅವರು ಹುಟ್ಟಿದ ಜಿಲ್ಲೆಯಲ್ಲೇ ಕನ್ನಡಕ್ಕೆ ನೆಲೆ ಸಿಗದಂತಾದರೂ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಇದನ್ನು ಕಂಡು ಕಾಣದಂತೆ ಮೌನವಹಿಸಿರುವುದು ನಿಜಕ್ಕೂ ಬೇಸರದ ವಿಚಾರವಾಗಿದೆ.

Vijayaprabha Mobile App free

ಇನ್ನಾದರೂ ತ್ರಿಭಾಷಾ ಸೂತ್ರದಂತೆ ಕನ್ನಡ ಫಲಕವನ್ನು ಅಳವಡಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.